ವಯನಾಡು:ಜುಲೈ 30ರಂದು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 320ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಮಣ್ಣಿನಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ.
ಘಟನೆ ಸಂಬಂಧ ವಯನಾಡಿಗೆ ಭೇಟಿ ನೀಡಿದ ನಿಕಟಪೂರ್ವ ಲೋಕಸಭಾ ಸದಸ್ಯ ರಾಹುಲ್​ ಗಾಂಧಿ ಸ್ಥಳ ಪರಿಶೀಲನೆ ನಡೆಸಿ ಕಾಂಗ್ರೆಸ್​ ವತಿಯಿಂದ 100 ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೇ ಘಟನೆಯನ್ನು ರಾಷ್ಟ್ರೀಯ ವಿಪತ್ತು ಎಂದು ಕರೆದಿದ್ದಾರೆ.
Kerala has never witnessed a tragedy in one area as devastating as the one in Wayanad this time. I will raise this issue with both the Union and State Governments, as this tragedy demands a unique and urgent response.Our immediate focus is on rescue, relief, and rehabilitation…pic.twitter.com/cdF3J5OgYE
ಇದನ್ನೂ ಓದಿ:ಕೋಳಿ ಮೊದಲಾ, ಮೊಟ್ಟೆ ಮೊದಲಾ?; ಮಿಲಿಯನ್​ ಡಾಲರ್​ ಪ್ರಶ್ನೆಗೆ ತಪ್ಪಾಗಿ ಉತ್ತರ ಹೇಳಿದ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿದ ಗೆಳೆಯ
ಕೇರಳದಲ್ಲಿ ಈ ಹಿಂದೆ ಒಂದೇ ಒಂದು ಪ್ರದೇಶದಲ್ಲಿ ಇಂತಹ ದುರ್ಘಟನೆ ನಡೆದಿಲ್ಲ. ಸಂಸತ್​ನಲ್ಲೂ ಈ ಬಗ್ಗರ ಪ್ರಸ್ತಾಪಿಸಿ ಸರ್ಕಾರದ ಗಮನವನ್ನು ಸೆಳೆಯುತ್ತೇವೆ. ತುರ್ತು ಸಮಗ್ರ ಕ್ರಿಯಾ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಧ್ಯವಾದ ರೀತಿಯಲ್ಲಿ ಸಹಾಯ ಮಾಡಲು ನಾವು ಇಲ್ಲಿದ್ದೇವೆ. ಕಾಂಗ್ರೆಸ್​ ವತಿಯಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ.
ಜುಲೈ 30ರಂದು ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 300ರ ಗಡಿ ದಾಟಿದೆ. ಇನ್ನೂ 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಭಾರಿ ಯಂತ್ರಗಳ ಮೂಲಕ ಕಲ್ಲುಬಂಡೆಗಳನ್ನು ತೆರುವುಗೊಳಿಸಿ, ಅವಶೇಷಗಳಡಿ ಸಿಲುಕಿರುವವರನ್ನು ಹೊರಕ್ಕೆ ತರಲು ರಕ್ಷಣಾ ತಂಡಗಳು ಎಡಬಿಡದೆ ಕಾರ್ಯಾಚರಣೆ ನಡೆಸುತ್ತಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
