ನವದೆಹಲಿ:ಇತ್ತೀಚೆಗೆ ಕೊವಿಡ್​-19, ಆರ್ಥಿಕತೆ, ಭಾರತ-ಚೀನಾ ಬಿಕ್ಕಟ್ಟು ಸೇರಿ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್​ ಸೋಮವಾರದಿಂದ ‘Save Democracy-Save Constitution’ (ಪ್ರಜಾಪ್ರಭುತ್ವ ರಕ್ಷಿಸಿ, ಸಂವಿಧಾನ ಉಳಿಸಿ) ಎಂಬ ಹೆಸರಿನಲ್ಲಿ ಪ್ರತಿಭಟನೆಯನ್ನು ಪ್ರಾರಂಭ ಮಾಡಲಿದೆ.
ಅದರ ಪೂರ್ವಭಾವಿಯಾಗಿ ಬಿಜೆಪಿ ಸರ್ಕಾರದ ವಿರುದ್ಧ ನಾಳೆ (ಭಾನುವಾರ) ಬೆಳಗ್ಗೆ 10 ಗಂಟೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ Speak Up for Democracy (ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ) ಎಂಬ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.ಇದನ್ನೂ ಓದಿ:ಕಾಶ್ಮೀರ..ಭಾರತೀಯ ಸೇನೆ ಬಗ್ಗೆ ಅವಹೇಳನ ಮಾಡಿದ್ದ ಜೆಎನ್​ಯು ವಿದ್ಯಾರ್ಥಿ ಸೈಯದ್​ ವಿರುದ್ಧ ಎಫ್​ಐಆರ್​
ಸೋಮವಾರದಿಂದ ಪ್ರಜಾಪ್ರಭುತ್ವ ಉಳಿಸಿ..ಸಂವಿಧಾನ ಉಳಿಸಿ ಪ್ರತಿಭಟನೆ ದೇಶಾದ್ಯಂತ ಪ್ರಾರಂಭವಾಗಲಿದೆ. ರಾಜಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಹಾಗೇ ನಾಳೆಯಿಂದ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ ಅಭಿಯಾನ ಸೋಶಿಯಲ್​ ಮೀಡಿಯಾದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್​ ಎಂಎಲ್​ಎ, ಎಂಪಿಗಳು ಫೋಟೋ, ವಿಡಿಯೋಗಳನ್ನು ಶೇರ್​ ಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್​ನ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಕೋಪ ಬಂದಿದ್ದು ಪತ್ನಿ ಮೇಲೆ..ಕೊಂದಿದ್ದು 14 ತಿಂಗಳ ಮಗುವನ್ನು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
