ಭೋಪಾಲ್:ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ದೇಹದಾರ್ಢ್ಯ ಪಟುಗಳು ಭಗವಾನ್ ಹನುಮಂತನ ಚಿತ್ರದ ಎದುರು ಬಿಕಿನಿಯಲ್ಲಿ ಪ್ರದರ್ಶನ ನೀಡಿದ್ದಾರೆ. ಈ ಬಗ್ಗೆ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ದೇಹದಾಢ್ಯ ಸ್ಫರ್ಧೆಯ ವೀಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಮಾರ್ಚ್ 4 ಮತ್ತು 5 ರಂದು ನಡೆದ 13 ನೇ ಮಿಸ್ಟರ್ ಜೂನಿಯರ್ ದೇಹದಾರ್ಢ್ಯ ಸ್ಪರ್ಧೆಯನ್ನು ರತ್ಲಾಮ್‌ನ ಮೇಯರ್ (ಬಿಜೆಪಿ) ಪ್ರಹ್ಲಾದ್ ಪಟೇಲ್ ಆಯೋಜಿಸಿದ್ದರು. ಇದರಲ್ಲಿ ರಾಜ್ಯ ಶಿಕ್ಷಣ ಸಚಿವ ಮೋಹನ್ ಯಾದವ್ ಭಾಗವಹಿಸಿದ್ದರು. ಮಹಿಳಾ ದೇಹದಾರ್ಢ್ಯ ಪಟುಗಳು ಹನುಮಂತನ ಚಿತ್ರದ ಮುಂದೆ ಪೋಸ್ ಕೊಟ್ಟಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದಾದ ಬಳಿಕ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ಹರಿಹಾಯ್ದಿವೆ.
ಇದನ್ನೂ ಓದಿ:ವಿದ್ಯುತ್ ತಂತಿ ತಗುಲಿ ಪ್ರಾಣ ಬಿಟ್ಟ ಮೂರು ಆನೆಗಳು
ಈ ಘಟನೆಯಿಂದ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಿಡಿಯಾಗಿದ್ದು, ಕಾರ್ಯಕ್ರಮ ನಡೆದ ಸ್ಥಳವನ್ನು ಗಂಗಾಜಲ ಹಾಕಿ ಶುದ್ಧೀಕರಿಸಿದ್ದಾರೆ. ಹನುಮಾನ್ ಚಾಲೀಸ ಪಠಿಸಿದ್ದಾರೆ. ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖಂಡರು ಇದು ಹನುಮಂತ ದೇವರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ರೈತರಿಗೆ ಪ್ರತಿ ವರ್ಷ 15 ಸಾವಿರ ರೂ. ಕೊಡುತ್ತೇನೆ: ಜನಾರ್ಧನ ರೆಡ್ಡಿ
ಈ ಘಟನೆ ಬಳಿಕ ಕಿಡಿ ಕಾರಿರುವ ಕಾಂಗ್ರೆಸ್, ಈ ಕಾರ್ಯಕ್ರಮ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ. ಇದು ದೇವರಿಗೆ ಮಾಡಿರುವ ಅವಮಾನ, ಈ ಕೂಡಲೇ ಕಾರ್ಯಕ್ರಮದ ಆಯೋಜಕರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.
2ನೇ ಬಾರಿಗೆ ಟ್ವಿಟ್ಟರ್‌ ಅಕ್ಷರಗಳ ಮಿತಿ ಹೆಚ್ಚಳ; ಶೀಘ್ರದಲ್ಲೇ ಹತ್ತು ಸಾವಿರಕ್ಕೆ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
