ತಿರುವನಂತಪುರಂ:ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್‌ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?
ಪಾಲಕ್ಕಾಡ್‌ನಲ್ಲಿ ಸಿಪಿಐ(ಎಂ) ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪಿ.ವಿ.ಅನ್ವರ್, ”ರಾಹುಲ್‌ ಗಾಂಧಿ ಅವರು ನೆಹರೂ ವಂಶಸ್ಥರಿಂದ ನಿರೀಕ್ಷಿಸುವ ಗುಣಮಟ್ಟವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅವರ ಡಿಎನ್‌ಎಯನ್ನು ಪರೀಕ್ಷಿಸಬೇಕುʼʼ ಎಂದು ಪಿ.ವಿ.ಅನ್ವರ್‌ ಹೇಳಿದ್ದಾರೆ.
ನಾನು ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‌ನ ಭಾಗವಾಗಿದ್ದೇನೆ. ನಾನು ಅವರನ್ನು ಗಾಂಧಿ ಎಂಬ ಉಪನಾಮದಿಂದ ಕರೆಯಲು ಸಾಧ್ಯವಿಲ್ಲ. ಅವರು ಗಾಂಧಿ ಉಪನಾಮದಿಂದ ಕರೆಯಲು ಅರ್ಹರಲ್ಲದ ನಾಗರಿಕನಾಗಿ ಮಾರ್ಪಟ್ಟಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಕಳೆದ ಎರಡು ದಿನಗಳಿಂದ ಭಾರತದ ಜನರು ಇದನ್ನು ಹೇಳುತ್ತಿದ್ದಾರೆʼʼ ಎಂದು ನಿಲಂಬೂರು ಕ್ಷೇತ್ರದ ಶಾಸಕ ಅನ್ವರ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಳ ದರ್ಜೆಯ ನಾಗರಿಕ. ರಾಹುಲ್ ಅವರು ನೆಹರು ಕುಟುಂಬದವರೋ, ಅಲ್ಲವೋ ಎಂಬುದನ್ನು ತಿಳಿಯಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕೇರಳದ ಪಕ್ಷೇತರ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯ ಬಗ್ಗೆ ಗರಂ ಆಗಿರುವ ಕಾಂಗ್ರೆಸ್, ಅನ್ವರ್ ಆಕ್ಷೇಪಾರ್ಹ ಹೇಳಿಕೆ ಹಿಂದೆ ಸಿಎಂ ಪಿಣರಾಯ್ ಪಾತ್ರವಿದೆ ಎಂದು ಆರೋಪಿಸಿದೆ. ಕೂಡಲೇ ಅವರ ವಿರುದ್ಧ ಕ್ರಮಕ್ಕೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fifteen =
Remember me
