ನಾಗ್ಪುರ:ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್​ ಪಕ್ಷ ಪೂರ್ವಭಾವಿಯಾಗಿ ಇಂದು (ಡಿಸೆಂಬರ್​ 28) ಮಹಾರಾಷ್ಟ್ರದ ನಾಗ್ಪುರದಲ್ಲಿ 139ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ದೊಡ್ಡ ಸಮಾವೇಶ ನಡೆಸುವ ಮೂಲಕ ರಣಕಹಳೆ ಊದಿದೆ.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್​ ಗಾಂಧಿ ಕೇಂದ್ರದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ ಜಾತಿಗಣತಿ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.
ಕಳೆದ 40 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಗರಿಷ್ಠ ಮಟ್ಟ ತಲುಪಿದೆ. ದೇಶದಲ್ಲಿ ಎರಡು ಸಿದ್ಧಾಂತಗಳ ನಡುವೆ ಸಂಘರ್ಷವಿದೆ. ನಮ್ಮ ಪಕ್ಷ ಬಿಜೆಪಿಯ ಹಾಗಲ್ಲ. ಕಿರಿಯ ಕಾಂಗ್ರೆಸ್ ಕಾರ್ಯಕರ್ತ ಕೂಡ ಪಕ್ಷದ ಉನ್ನತ ನಾಯಕರನ್ನು ಪ್ರಶ್ನಿಸಬಹುದು ಮತ್ತು ಅವರ ನಿರ್ಣಯಗಳನ್ನು ತಿರಸ್ಕರಿಸಬಹುದು ಎಂದು ಹೇಳಿದ್ದಾರೆ.
पिछले दिनों BJP का एक MP मुझसे लोकसभा में मिला।उसने कहा- आपसे बात करनी है। उसके चेहरे पर चिंता थी।मैंने पूछा- सब ठीक है?उसने कहा- नहीं, सब ठीक नहीं है। BJP में रहकर अच्छा नहीं लग रहा। मेरा दिल कांग्रेस में है।BJP में गुलामी चलती है। जो ऊपर से कहा जाता है, वो बिना सोचे…pic.twitter.com/Af8YcSVUqA
ಇದನ್ನೂ ಓದಿ:ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡ್ತಿದ್ದಂತೆ ಸಂಗೀತಾ ಜತೆ ಮಾತಿಗಿಳಿದ ವಿನಯ್​ ಪತ್ನಿ; ಇನ್ನೇನೋ ಆಗೋ ಹಾಗಿದೆ ಗುರು ಎಂದ ನೆಟ್ಟಿಗರು
ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಬಿಜೆಪಿ ಸಂಸದರೊಬ್ಬರು ನನ್ನನ್ನು ಭೇಟಿಯಾಗಿ ಗುಲಾಮರಾಗಿದ್ದರೆ ಮಾತ್ರ ಆ ಪಕ್ಷದಲ್ಲಿ ಉಳಿಗಾಲ ಎಂದು ಹೇಳಿದ್ದರು. ಅವರು ನನ್ನ ದೇಹ ಮಾತ್ರ ಬಿಜೆಪಿಯಲ್ಲಿದೆ ಮನಸ್ಸೆಲ್ಲಾ ಕಾಂಗ್ರೆಸ್​ನಲ್ಲಿದೆ ಎಂದು ಹೇಳಿದ್ದರು. ಮೇಲಿಂದ ಬರುವ ಆದೇಶಗಳನ್ನು ಪಾಲಿಸಬೇಕು ಮತ್ತು ಪಕ್ಷದ ಕಾರ್ಯಕರ್ತರ ಮಾತನ್ನು ಯಾರೂ ಕೇಳುವುದಿಲ್ಲ ಎಂದು ಅವರು ನನಗೆ ಹೇಳಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆರೋಪಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 2 =
Remember me
