ಜೈಪುರ:ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಕಾಂಗ್ರೆಸ್​ ಬಹುಮತದೊಂದಿಗೆ ಮೊದಲನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಬಿಜೆಪಿ ಎರಡನೇ ಸ್ಥಾನಕ್ಕೇ ತೃಪ್ತಿ ಪಡುವಂತಾಗಿದೆ.
ಇದನ್ನೂ ಓದಿ:ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು
12 ಜಿಲ್ಲೆಗಳ 50 ಸ್ಥಾನಗಳ ಪೈಕಿ ಕಾಂಗ್ರೆಸ್​ 36 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 12 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದ ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯ ಸಾಧಿಸಿದ್ದಾರೆ.
ಈ 50 ನಾಗರಿಕ ಸ್ಥಾನಗಳಲ್ಲಿ 7 ನಗರ ಸಭೆ ಮತ್ತು 43 ಪುರಸಭೆ ಸ್ಥಾನಗಳಿವೆ. ನಗರ ಸಭೆಯ 7 ಸ್ಥಾನಗಳಲ್ಲಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಕೇವಲ 1 ಸ್ಥಾನವನ್ನು ಗೆದ್ದಿದೆ. ಇನ್ನೊಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. 50 ಸ್ಥಾನಗಳ ಪೈಕಿ 28 ಸ್ಥಾನಗಳಲ್ಲಿ ಪುರುಷ ಅಭ್ಯರ್ಥಿಗಳು ಮತ್ತು 22 ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳು ಗೆದ್ದಿದ್ದಾರೆ.
ಇದನ್ನೂ ಓದಿ:ಚಿನ್ನಾಭರಣ ಪ್ರಿಯರಿಗೆ ಬಿಗ್​ ಶಾಕ್​! ಒಂದೇ ವಾರದಲ್ಲಿ ಶೇ. 2 ಏರಿದ ಗೋಲ್ಡ್​ ರೇಟ್​!
ಚುನಾವಣಾ ಫಲಿತಾಂಶದ ಬಗ್ಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಕಾಂಗ್ರೆಸ್ಸಿನ ದುಷ್ಕೃತ್ಯದಿಂದ ಸಾರ್ವಜನಿಕರು ತೊಂದರೆಗೀಡಾಗಿದ್ದಾರೆ ಎಂದು ರಾಜಸ್ಥಾನ ಬಿಜೆಪಿ ಉಸ್ತುವಾರಿ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಈಗಲೇ ವಿಧಾನಸಭಾ ಚುನಾವಣೆ ನಡೆದರೂ ಬಿಜೆಪಿ ನಾಲ್ಕನೇ ಮೂರು ಮತಗಳೊಂದಿಗೆ ವಿಜಯ ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

ಹಸೆಮಣೆ ಏರಬೇಕಾದವಳು ಆಸ್ಪತ್ರೆ ಸೇರಿದಳು! ಆಸ್ಪತ್ರೆಯ ಹಾಸಿಗೆಯಲ್ಲೇ ನಡೆಯಿತು ಮದುವೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
