ವಡೋದರಾ:ಗುಜರಾತ್​ ಮುಖ್ಯಮಂತ್ರಿ ಕಚೇರಿ ಸಿಬ್ಬಂದಿಯಂತೆ ಫೋಸ್​ ನೀಡಿ ಮಹಿಳೆಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ವಡೋದರಾ ಪೊಲಿಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿ ವಿರಾಜ್​ ಅಶ್ವಿನ್​ ಪಟೇಲ್​ ತಾನು ಸರ್ಕಾರಿ ಉದ್ಯೋಗಿಯಾಗಿದ್ದು ಮುಖ್ಯಮಂತ್ರಿ ಕಚೇರಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಮಹಿಳೆಯರಿಗೆ ಗಾಳ ಹಾಕುತ್ತಿದ್ದ.
ಇದನ್ನೂ ಓದಿ:VIDEO| ನೋಡ ನೋಡುತ್ತಿದ್ದಂತೆ ಬಡಿದಾಡಿಕೊಂಡ IPL ಅಭಿಮಾನಿಗಳು!
ಸರ್ಕಾರಿ ಕಾರ್ಯಕ್ರಮಗಳಿಗೆ ತಮ್ಮನ್ನು ರಾಯಭಾರಿಯನ್ನಾಗಿ ಮಾಡುವುದಾಗಿ ಹೇಳಿ ಮಹಿಳೆಯರನ್ನು ತನ್ನ ಕಾಮತೃಷೆಗೆ ಬಳಸಿಕೊಂಡು ನಂತರ ಅವರ ಕೈಗೆ ಸಿಗದೆ ವಂಚಿಸುತ್ತಿದ್ದ.
ಆರೋಪಿ ವಿರಾಜ್ ಇದೇ ರೀತಿ ಮುಂಬೈ ಮೂಲದ ಮಹಿಳೆಯನ್ನು ಪರಿಚಯ ಮಾಡಿಕೊಂಡು ತಾನು ಮುಖ್ಯಮಂತ್ರಿಗಳ ಕಾರ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದು ಗುಜರಾತ್ ಇಂಟರ್​ನ್ಯಾಷನಲ್​​ ಫೈನಾನ್ಸ್​ ಟೆಕ್​ ಸಿಟಿ(GIFT)ಯ ಅಧ್ಯಕ್ಷ ಎಂದು ಮಹಿಳೆ ಬಳಿ ಹೇಳಿಕೊಂಡಿದ್ದಾನೆ.
ನಿನ್ನನ್ನು ಗಿಫ್ಟ್​ ಸಿಟಿಯ ರಾಯಭಾರಿಯನ್ನಾಗಿ ಮಾಡುವುದಾಗಿ ಹೇಳಿ ನಂಬಿಸಿದ ಆರೋಪಿಯು ಬಳಿಕ ಮಹಿಳೆಯನ್ನು ಗೋವಾಕ್ಕೆ ಕರೆದುಕೊಂಡು ಹೋಗಿ ಹಲವು ಭಾರಿ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ವಂಚನೆ, ಅತ್ಯಾಚಾರ ಆರೋಪದಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
