ಜೈಪುರ:ಪ್ರಧಾನಿ ನರೇಂದ್ರ ಮೋದಿ ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ. ಬಲವಂತವಾಗಿ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಜೈಪುರದಲ್ಲಿ ಕಾಂಗ್ರೆಸ್​ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಸೋನಿಯಾ ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಸೋಲೋ ಪಂದ್ಯವನ್ನು ಗೆಲ್ಲಿಸಿದವನಿಗೆ ಕೃತಜ್ಞತೆ ತೋರದ ಪಂಜಾಬ್​ ಕಿಂಗ್ಸ್​
ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ. ಇದು ಸರ್ವಾಧಿಕಾರವಾಗಿದ್ದು ಇದಕ್ಕೆ ನಾವೆಲ್ಲರೂ ಉತ್ತರವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
