ನವದೆಹಲಿ:ತಿಹಾರ್ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯಕ್ಕೆ ಒಳಗಾಗಲು ಉದ್ದೇಶಪೂರ್ವಕವಾಗಿ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಎಎಪಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರನ್ನು ಜೈಲಿನೊಳಗೆ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ:ಕೆಲ ವರ್ಷಗಳಲ್ಲಿ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ ಅಸ್ಸಾಂ; ಸಿಎಂ ಹಿಮಂತ ಬಿಸ್ವಾ ಶರ್ಮಾ
ಜೂನ್ 3 ಮತ್ತು ಜುಲೈ 7ರ ನಡುವೆ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು 50ಕ್ಕಿಂತ ಕಡಿಮೆ ಅಥವಾ ಸುಮಾರು 30 ಪಟ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು. ಈ ಹಂತದಲ್ಲಿ ಯಾವುದೇ ವ್ಯಕ್ತಿಯು ಕೋಮಾಕ್ಕೆ ಹೋಗಬಹುದು ಮತ್ತು ಸಾಯಬಹುದು. ಆದರೆ ಲೆಫ್ಟಿನೆಂಟ್ ಗವರ್ನರ್ ಮತ್ತು ಬಿಜೆಪಿ ಅರವಿಂದ್ ಕೇಜ್ರಿವಾಲ್ ಬಗ್ಗೆ ಸುಳ್ಳು ವರದಿಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಕೇಜ್ರಿವಾಲ್ ಅವರ ಆರೋಗ್ಯದ ವಿಚಾರದಲ್ಲಿ ಬಿಜೆಪಿ ಚೆಲ್ಲಾಟವಾಡುತ್ತಿದೆ. ಆರಂಭದಲ್ಲಿ ಅವರು ಸಿಹಿ ತಿಂದು ಸಕ್ಕರೆ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಈಗ ಕೇಜ್ರಿವಾಲ್ ತಮ್ಮ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ದಾರೆ. ಜೈಲಿನಲ್ಲಿ ಏನನ್ನೂ ತಿನ್ನುತ್ತಿಲ್ಲ, ಕಡಿಮೆ ಕ್ಯಾಲೋರಿಗಳನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಜೀವನವನ್ನು ತೊಂದರೆಗೆ ದೂಡಿಕೊಳ್ಳಲು ಹೇಗೆ ಸಾಧ್ಯ? ಎಂದು ಸಂಜಯ್​ಸಿಂಗ್​​ ಪ್ರಶ್ನಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಜೈಲಿನೊಳಗೆ ಸಂಚು ನಡೆಯುತ್ತಿದೆ. ಇದೇ ಕಾರಣಕ್ಕೆ ಜಾಮೀನು ಮಂಜೂರಾದ ತಕ್ಷಣ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೊರೆ ಹೋಗಿ, ನ್ಯಾಯಾಲಯದ ಆದೇಶದ ಪ್ರತಿ ಬರದಿದ್ದರೂ ತಡೆ ತೆಗೆದುಕೊಂಡಿದೆ. ಅಷ್ಟೇ ಅಲ್ಲ ಜಾಮೀನು ಸಿಕ್ಕ ಕೂಡಲೇ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ನಕಲಿ ಪ್ರಕರಣದಲ್ಲಿ ಬಂಧಿಸಿತ್ತು ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ. (ಏಜೆನ್ಸೀಸ್​​)
ಮನುಷ್ಯ ದೇವರಾಗಲು ಬಯಸುತ್ತಾನೆ ಎಂದಿದ್ದೇಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 4 =
Remember me
