ಕೊಚ್ಚಿ:ಕಟು ಟೀಕೆಗಳನ್ನು ಎದುರಿಸಿದ ಕೇರಳ ಪೊಲೀಸ್ ಕಾಯ್ದೆ ತಿದ್ದುಪಡಿಯನ್ನು ಕೇರಳ ಸರ್ಕಾರ ಸೋಮವಾರ ಹಿಂತೆಗೆದುಕೊಂಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಸೋಮವಾರ ಈ ವಿಷಯವನ್ನು ಪ್ರಕಟಿಸಿದ್ದಾರೆ. ಎಲ್​ಡಿಎಫ್ ಬೆಂಬಲಿಗರು ವ್ಯಕ್ತಪಡಿಸಿದ ಕಾಳಜಿಯನ್ನು ಪರಿಗಣಿಸಿದ ಸರ್ಕಾರ, ಕಾಯ್ದೆ ತಿದ್ದುಪಡಿ ಕ್ರಮವನ್ನು ಹಿಂಪಡೆದಿದೆ ಎಂದು ಸಿಎಂ ವಿಜಯನ್ ಸ್ಪಷ್ಟಪಡಿಸಿದ್ದಾರೆ.
ಪೊಲೀಸ್ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ಪ್ರಕಟಿಸಿದಾಗ ವಿವಿಧ ರೀತಿಯ ಪ್ರತಿಕ್ರಿಯೆಗಳು ಲಭ್ಯವಾಗಿವೆ. ವಿವಿಧ ದೃಷ್ಟಿಕೋನಗಳ ನಿಲುವು ಕಂಡುಬಂದಿದೆ. ಎಲ್​ಡಿಎಫ್​ ಬೆಂಬಲಿಗರು ತೋರಿಸಿದ ಕಾಳಜಿ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತವರ ನಿಲುವನ್ನು ಸರ್ಕಾರ ಗೌರವಿಸುತ್ತದೆ. ಈ ಪರಿಸ್ಥಿತಿಯಲ್ಲಿ ಕಾಯ್ದೆ ತಿದ್ದುಪಡಿ ಸರಿ ಅಲ್ಲ ಎಂಬುದು ಸರ್ಕಾರಕ್ಕೂ ಮನವರಿಕೆಯಾಗಿದೆ ಎಂದು ಸಿಎಂ ವಿಜಯನ್ ತಿಳಿಸಿದ್ದಾರೆ.
ಇದನ್ನೂ ಓದಿ:ಕೇರಳದಲ್ಲಿ ಸುಗ್ರೀವಾಜ್ಞೆ ಕಿಡಿ: ಪೊಲೀಸ್ ಕಾಯ್ದೆ ತಿದ್ದುಪಡಿ, ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ?
ಈ ಕುರಿತು ವಿಧಾನಸಭೆಯಲ್ಲಿ ವಿಸ್ತೃತವಾದ ಚರ್ಚೆಗೆ ಅವಕಾಶ ನೀಡಲಾಗುತ್ತದೆ. ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಎಲ್ಲ ಪಕ್ಷಗಳ ದೃಷ್ಟಿಕೋನಗಳು, ಅಭಿಪ್ರಾಯಗಳನ್ನೂ ಸ್ವೀಕರಿಸಿ ಸರ್ಕಾರ ಒಂದು ತೀರ್ಮಾನಕ್ಕೆ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು. (ಏಜೆನ್ಸೀಸ್)
ದೇಶಕ್ಕೀಗ ಹದಿಹರೆಯ, ಸಾಧಿಸಬೇಕಾದ್ದು ಬಹಳಷ್ಟಿದೆ- ಸಂಸದರ ಫ್ಲ್ಯಾಟ್ ಕಟ್ಟಡ ಉದ್ಘಾಟಿಸಿ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 2 =
Remember me
