ಬರೇಲಿ:ಕಬಾಬ್​ ರುಚಿ ಚೆನ್ನಾಗಿರಲಿಲ್ಲ ಹಾಗೂ ಬಿಲ್​ ಪಾವತಿಸಲು ಸೂಚಿಸಿದರು ಎಂಬ ಕಾರಣಕ್ಕೆ ಅಡುಗೆ ಭಟ್ಟನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಘಟನೆಯೂ ಬರೇಲಿಯ ಪ್ರಿಯದರ್ಶಿನಿ ನಗರದಲ್ಲಿ ನಡೆದಿದ್ದು ಮೃತ ದುರ್ದೈವಿಯನ್ನು ಅಂಕುರ್​ ಸಬರ್​ವಾಲ್​(52) ಎಂದು ಗುರುತು ಹಿಡಿಯಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ಕುಡಿದ ಮತ್ತಿನಲ್ಲಿ ಐಷಾರಾಮಿ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮೊದಲಿಗೆ ಕಬಾಬ್​ ಆರ್ಡರ್​ ಮಾಡಿ ತರಿಸಿಕೊಂಡು ತಿಂದಿದ್ದಾರೆ.
ಇದನ್ನೂ ಓದಿ:ಜಮ್ಮು-ಕಾಶ್ಮಿರದಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಇಬ್ಬರಿಗೆ ಗಾಯ
ಆ ನಂತರ ಅಂಗಡಿ ಮಾಲೀಕ ಅಂಕುರ್​ ಅವರ ಬಳಿ ಕಳಪೆ ಗುಣಮಟ್ಟದ ಆಹಾರವನ್ನು ನೀಡಿದ್ದೀಯಾ ಎಂದು ಖ್ಯಾತೆ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿಗಳು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ತೆರಳಿದ್ದಾರೆ.
ಈ ವೇಳೆ ಅಂಕುರ್​ ತನ್ನ ಬಳಿ ಕೆಲಸಕ್ಕಿದ್ದ ನಸೀರ್​ ಅಹ್ಮದ್​ಗೆ ಆರೋಪಿಗಳ ಬಳಿ ಕಬಾಬ್​ ಬಿಲ್​ 120 ರೂಪಾಯಿಯನ್ನು ತೆಗೆದುಕೊಂಡು ಬರುವಂತೆ ಸೂಚಿಸಿದಾಗ ಕುಪಿತಗೊಂಡ ಆರೋಪಿಗಳು ಅಂಗಡಿ ಮಾಲೀಕ ಅಂಕುರ್​ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ತೀವ್ರ ರಕ್ತಸ್ರಾವದಿಂದ ಅಂಗಡಿ ಮಾಲೀಕ ಅಂಕುರ್​ ಸಬರ್​ವಾಲ್​ ಸ್ಥಳದಲ್ಲೇ ಸಾವಿಗೀಡಾಗಿದ್ದು ಹತ್ಯೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಕಾರನ್ನು ಉತ್ತರಾಖಂಡದ ಕಾಶಿಪುರದಲ್ಲಿ ಪತ್ತೆ ಹಚ್ಚಲಾಗಿದೆ.
ಆರೋಪಿಗಳು ಕಾರನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾರೆ. ಅವರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven + fifteen =
Remember me
