ನವದೆಹಲಿ:ಸದ್ಯದಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಸುಳಿವು ನೀಡಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಇಷ್ಟರಲ್ಲೇ ಸ್ವಲ್ಪ ಮಟ್ಟಿನ ನಿರಾಳತೆ ಸಿಗಲಿದೆ.
ಲೀಟರ್​ಗೆ 15 ರೂ.ನಷ್ಟು ಇಳಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೇಂದ್ರ ಚಿಂತನೆ ನಡೆಸಿದ್ದು, ಜುಲೈ 6 ರಂದು ತೈಲ ಸಂಘಗಳಿಗೆ ಬೆಲೆ ಇಳಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಡುಗೆ ಎಣ್ಣೆಯಲ್ಲಿ 15 ರೂ. ಇಳಿಕೆ ಮಾಡಲು ಹೇಳಲಾಗಿದ್ದು, ಸದ್ಯದಲ್ಲೇ ಇದನ್ನು ಜಾರಿಗೊಳಿಸಲಾಗುವುದು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ಸಚಿವಾಲಯ ಹೇಳಿದೆ.
ಖಾದ್ಯ ತೈಲಗಳ ಬೆಲೆಗಳನ್ನು ತಕ್ಷಣವೇ ಕಡಿಮೆ ಮಾಡಬೇಕು, ತಯಾರಕರು ಮತ್ತು ಸಂಸ್ಕರಣಾಗಾರರಿಂದ ವಿತರಕರಿಗೆ ಕಡಿಮೆ ಬೆಲೆಯಲ್ಲಿ ನೀಡಿದಾಗ ಮಾತ್ರ ಸಗಟು ಮಾರಾಟದಲ್ಲೂ ಸಹ ಇಳಿಕೆ ಮಾಡಬಹುದು. ಈ ಕುರಿತು ಇಲಾಖೆಗೆ ಮಾಹಿತಿಯನ್ನು ನೀಡಬೇಕೆಂದೂ ಸಚಿವಾಲಯ ತಿಳಿಸಿದೆ.
ಈ ಹಿಂದೆ ಬೆಲೆಯನ್ನು ಕಡಿಮೆ ಮಾಡದ ಪ್ರಮುಖ ತೈಲ ಉತ್ಪಾದಕರೂ ಕೂಡ ತಮ್ಮ ಬೆಲೆಗಳನ್ನು ಕಡಿತಗೊಳಿಸಲೇಬೇಕೆಂದು ಎಚ್ಚರಿಕೆಯನ್ನೂ ನೀಡಿದೆ.(ಏಜೆನ್ಸೀಸ್​)
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್​ ಅಧಿಕಾರಿ ಅಮಾನತು: ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
