ಮುಂಬೈ:ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್​ ಅಧಿಕಾರಿ ಹಾಗೂ ಅವರ ಮಗಳು ಶವವಾಗಿ ಪತ್ತೆಯಾಗಿದ್ದು, ಪತಿಯ ಮರದಲ್ಲಿ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿರುವ ಘಟನೆ ಮಹಾರಾಷ್ಟ್ರದೆ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ತನ್ನ ಪತ್ನಿ ಹಾಗೂ ಮೂರು ವರ್ಷದ ಮಗಳನ್ನು ಕೊಂದು ಆ ನಂತರ ನೇಣಿಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಿಖ್ಲಿ ಪೊಲೀಸ್​ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮೃತರನ್ನು ವರ್ಷಾ ಕುಟೆ, ಕಿಶೋರ್​ ಕುಟೆ ಎಂದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಿಶೋರ್​ ತನ್ನ ಹೆಂಡತಿ ಹಾಗೂ ಮಗಳನ್ನು ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿದ ಬಳಿಕ ಆರೋಪಿ ಮನೆಯಿಂದ ಸುಮಾರು 15 ಕಿಲೋಮೀಟರ್​ ದೂರವಿರುವ ಚಿಖ್ಲಿ ಎಂಬ ಪ್ರದೇಶಕ್ಕೆ ಬಂದಿದ್ದು, ಅಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.
ಇದನ್ನೂ ಓದಿ:VIDEO| ಐಶ್ವರ್ಯ ರೈ ಅವರಂತೆ ಕಾಣಲು ಪ್ರತಿನಿತ್ಯ ಮೀನು ಸೇವಿಸಿ ಎಂದ ಬಿಜೆಪಿ ಸಚಿವ
ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೂರು ವರ್ಷದ ಮಗಳನ್ನು ಆರೋಪಿ ಹತ್ಯೆ ಮಾಡಿದ್ದಾನೆ. ಘಟನೆ ನಡೆದಾಗ ದೊಡ್ಡ ಮಗಳು ಶಾಲೆಗೆ ಹೋಗಿದ್ದಳು. ಯಾವ ಕಾರಣಕ್ಕೆ ಹತ್ಯೆ ಮಾಡಿರಬಹುದು ಎಂದು ಪತ್ತೆ ಹಚ್ಚಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯರೊಬ್ಬರು ದಂಪತಿಗಳ ನಡುವೆ ಯಾವುದೇ ತರಹದ ಕಲಹವಿರಲಿಲ್ಲ. ಇಬ್ಬರು ತುಂಬಾ ಅನ್ಯೋನ್ಯವಾಗಿದ್ದರು. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ಪೊಲೀಸ್​ ತನಿಖೆ ಬಳಿಕ ಬೆಳಕಿಗೆ ಬರಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
