ಕೊಚ್ಚಿ:ವಾಹನ ಖರೀದಿಸಿ ಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಮಾಡಿರುವ ಆರೋಪ ಕೇರಳದ ಪೊಲೀಸ್​ ಪೇದೆ ಒಬ್ಬರ ವಿರುದ್ಧ ಕೇಳಿಬಂದಿದೆ. ಪೊಲೀಸ್​ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾಕಷ್ಟು ಮಹಿಳೆಯಿಂದ ಆರೋಪಿ ಹಣ ಸುಲಿಗೆ ಮಾಡಿದ್ದಾನೆ.
ಆರೋಪಿಯ ಹೆಸರು ಬಿನುಕುಮಾರ್​. ಈತ ಕೇರಳದ ಕೊನ್ನಿ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರು ಖರೀದಿ ಮಾಡಿ ಕೊಡುವುದಾಗಿ ಮಹಿಳೆಯೊಬ್ಬರಿಂದ 13.5 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿದ್ದು, ವಾಪಸ್​ ಕೇಳಿದ್ದಕ್ಕೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಲಾಗಿದೆ.
ಕಾರು ಖರೀದಿ ಮಾಡಿದ್ದಲ್ಲದೆ, ಬಳಿಕ ಅದನ್ನು 10 ಲಕ್ಷ ರೂಪಾಯಿಗೆ ಅಡಮಾನ ಇಟ್ಟಿದ್ದಾನೆ. ಈ ಕೊನ್ನಿ ಪೊಲೀಸ್​ ಠಾಣೆಗೆ ಸೇರಿದಾಗಿನಿಂದ ಸುಮಾರು ಐವರು ಮಹಿಳೆಯರಿಗೆ ವಂಚನೆ ಮಾಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಹಿಂದೆ ಪೆರುನಾಡು ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾಗಲೂ ಮಹಿಳೆಯರಿಗೆ ವಂಚನೆ ಮಾಡಿರುವುದಾಗಿ ತಿಳಿದುಬಂದಿದೆ. ವಿಧವೆಯೊಬ್ಬರ ಬಳಿ 2 ಲಕ್ಷ ರೂ. ಹಾಗೂ ಇತರರಿಂದ ಸುಮಾರು 50 ಸಾವಿರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಮಾಡಲಾಗಿದೆ.(ಏಜೆನ್ಸೀಸ್​)
ಇನ್ಸ್​ಪೆಕ್ಟರ್​ ನಂದೀಶ್ ಸಾವು ಪ್ರಕರಣ: ಪೊಲೀಸ್​ ಕಮಿಷನರ್ ವಿರುದ್ಧವೇ ದೂರು ದಾಖಲು

ಬಾಲಿವುಡ್​ ಸ್ಟೈಲ್​ನಲ್ಲಿ ಬೈಕ್ ಸ್ಟಂಟ್​: ನವಜೋಡಿಯ ವಿಭಿನ್ನ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ವಿಡಿಯೋ ವೈರಲ್​

https://www.vijayavani.net/the-rise-and-orchestrated-fall-of-the-sports-live-gaming-industry/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
