ಬಿಹಾರ:ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದವರನ್ನು ಬಂಧಿಸಲು ತೆರಳಿದ್ದ ಪೊಲೀಸ್​ ಅಧಿಕಾರಿಯ ಮೇಲೆ ಚುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಸಮಸ್ತೀಪುರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ನಂದಕಿಶೋರ್​ ಯಾದವ್​ ಮೃತಪಟ್ಟಿದ್ದಾರೆ. ಇವರು ಮೋತಿಹಾರಿ ಪೊಲೀಸ್​ ಠಾಣಾಧಿಕಾರಿಯಾಗಿ​ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ 2024ಕ್ಕೆ ಅವರ ಮನೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಟೀಕೆ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಯ್​ ತಿವಾರಿ ಜಾನುವಾರುಗಳ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನಮ್ಮ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಮೂವರು ಆರೋಪಿಗಳನ್ನು ಬಂಧಿಸಿ, ಹಸುಗಳನ್ನು ರಕ್ಷಿಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಬರುವ ವೇಳೆ ಬಂಧಿತರ ಸಹಚರರು ಏಕಾಏಕಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಮ್ಮ ಅಧಿಕಾರಿ ನಂದಕಿಶೋರ್​ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳು ತಲೆ ಮಾರಿಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಯ್​ ತಿವಾರಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
