ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಮೂರು ದಿನಗಳಿಂದ ಭಯೋತ್ಪಾದಕ ದಾಳಿ ನಡೆಯುತ್ತಿದ್ದು, ಇಂದು ಉಗ್ರರ ದಾಳಿಗೆ ಪೊಲೀಸ್​ ಕಾನ್​ಸ್ಟೆಬಲ್ ಒಬ್ಬರು ಬಲಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಈ ಘಟನೆ ನಡೆದಿದೆ.
ಬಾರಾಮುಲ್ಲಾ ಜಿಲ್ಲೆಯ ಕರಲ್ಪೊರ ಎಂಬಲ್ಲಿನ ನಿವಾಸಿ, ಪೊಲೀಸ್ ಕಾನ್​ಸ್ಟೆಬಲ್ ಗುಲಾಮ್ ಮೊಹಮ್ಮದ್ ದಾರ್ ಉಗ್ರರಿಂದ ಹತ್ಯೆಗೀಡಾದ ವ್ಯಕ್ತಿ. ಮನೆಗೇ ನುಗ್ಗಿದ ಉಗ್ರರು ಈತನನ್ನು ಗುಂಡಿಟ್ಟು ಕೊಂದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಈತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಸಾವು ಸಂಭವಿಸಿದೆ ಎಂದು ವೈದ್ಯರು ಬಳಿಕ ಖಚಿತ ಪಡಿಸಿದ್ದಾರೆ.
ಇದನ್ನೂ ಓದಿ:ಕೊನೆಗೂ ಅಲ್ಲಿ ರಾಜ್ಯೋತ್ಸವ ಆಚರಿಸಲು ಅವಕಾಶ ಸಿಕ್ತು: ಉಚ್ಚ ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ
ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಆರೋಪಿಗಳಿಗೆ ಹುಡುಕಾಟ ಆರಂಭಿಸಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಇದು ಮೂರು ದಿನಗಳಲ್ಲಿ ಮೂರನೇ ದಾಳಿ. ನಿನ್ನೆ ವಲಸೆ ಕಾರ್ಮಿಕರೊಬ್ಬರನ್ನು ಪುಲ್ವಾಮಾದಲ್ಲಿ ಕೊಲ್ಲಲಾಗಿತ್ತು. ಭಾನುವಾರ ಪೊಲೀಸ್ ಇನ್​ಸ್ಪೆಕ್ಟರ್​ಗೇ ಶೂಟ್ ಮಾಡಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು.
ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
