ಭೋಪಾಲ್​:ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಅಪರಾಧ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆಯಿಂದಾಗಿ ಮಧ್ಯಪ್ರದೇಶ ರಾಜ್ಯವು ರಾಷ್ಟ್ರದ ಗಮನ ಸೆಳೆಯುತ್ತಿದ್ದು, ಇದೀಗ ಪೊಲೀಸ್​ ಅಧಿಕಾರಿಯೊಬ್ಬರು ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ತಾಯಿಗೆ ಕಪಾಳಕ್ಕೆ ಹೊಡೆಯುವ ಮೂಲಕ ಸುದ್ದಿಯಾಗಿದ್ದಾರೆ.
ಮಧ್ಯಪ್ರದೇಶದ ಶಹದೋಲ್​ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಹಲ್ಲೆ ನಡೆಸಿದ ಅಧಿಕಾರಿಯನ್ನು ವಿಚಾರ ತಿಳಿದ ಕೂಡಲೇ ಕೆಲಸದಿಂದ ಅಮಾನತು ಮಾಡಲಾಗಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ಮುಖೇಶ್​ ವೈಷ್ಯ ಶೆಹದೋಲ್​ ಜಿಲ್ಲೆಯ ಜೈತ್​ಪುರ ಗ್ರಾಮದ ನಿವಾಸಿಯಾದ 9 ವರ್ಷದ ಬಾಲಕನಿಗೆ ಹಾವು ಕಚ್ಚಿದ ಪರಿಣಾಮ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ಎರಡು ದಿನಗಳ ಬಳಿಕ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕಾರಣ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ:ಒಡಿಶಾ ರೈಲು ದುರಂತ; ಮೂವರು ಅಧಿಕಾರಿಗಳನ್ನು ಬಂಧಿಸಿದ ಸಿಬಿಐ
ಮಗನ ಮೃತದೇಹವನ್ನು ತಾಯಿ ತಬ್ಬಿ ಸುಮಾರು ಹೊತ್ತು ಅಳುತ್ತಿದ್ದರು. ಈ ವೇಳೆ ಸಂತೋಷ್​ ಸಿಂಗ್​ ಪರಿಹಾರ್​ ಎಂಬ ಅಧಿಕಾರಿಯೂ ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸ ಬೇಕಾಗಿರುವ ಕಾರಣ ಅದನ್ನು ಕೊಡುವಂತೆ ಹೇಳಿದ್ದಾನೆ. ಈ ವೇಳೆ ಇದಕ್ಕೊಪ್ಪದ ಬಾಲಕನ ತಾಯಿಯ ವರ್ತನೆಯಿಂದ ಸಿಟ್ಟಿಗೆದ್ದ ಅಧಿಕಾರಿಯೂ ಆಕೆಯ ಕಪಾಳಕ್ಕೆ ಹೊಡೆದಿದ್ದಾನೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಕೂಡಲೇ ಕಳಂಕಿತ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಬಾಲಕನ ಶವವನ್ನು ಕುಟುಂಬಸ್ಥರ ಮನವೊಲಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ಮುಖೇಶ್​ ವೈಷ್ಯ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
