ಹೈದರಾಬಾದ್​:ಜನರ ಸುರಕ್ಷೆತೆಗಾಗಿ ಸರ್ಕಾರ ಅನೇಕ ರೀತಿಯ ಕ್ರಮಗಳನ್ನು ಜಾರಿಗೆ ತಂದಿದ್ದು, ವಾಹನ ಚಾಲನೆ ಮಾಡುವಾಗ ಬೈಕ್​ ಸವಾರರು ಕಡ್ಡಾಯವಾಗಿ ಹೆಲ್ಮೆಟ್​ ಧರಿಸಬೇಕು, ಕಾರು ಚಲಾಯಿಸುವವರು ಸೀಟ್ ಬೆಲ್ಟ್ ಧರಿಸಬೇಕು ಎಂಬುದರ ಜೊತೆಗೆ ಅನೇಕ ನಿಯಮಗಳನ್ನು ಜಾರಿಗೆ ತರಲಾಗಿದೆ. ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿದರೆ ಭಾರೀ ದಂಡವನ್ನು ಕಟ್ಟಬೇಕಾಗುತ್ತದೆ. ಇದೀಗ ಅದಕ್ಕೆ ಪೂರಕವೆಂಬಂತೆ ಸ್ವಾರಸ್ಯಕರ ಘಟನೆಯೊಂದು ನಡೆದಿದ್ದು, ಈ ವಿಚಿತ್ರ ಪ್ರಕರಣ ಎಲ್ಲರ ಹುಬ್ಬೇರುವಂತೆ ಮಾಡಿದೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಟ್ರ್ಯಾಕ್ಟರ್​ ಚಾಲಕನೋರ್ವ ಸೀಟ್​ಬೆಲ್ಟ್​ ಧರಿಸಿಲ್ಲ ಎಂಬ ಕಾರಣಕ್ಕೆ ಆತನಿಗೆ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ಎಲ್ಲರ ಹುಬ್ಬೇರುವಂತೆ ಮಾಡಿದ್ದು, ಈ ಹಿಂದೆ ಮಹಬೂಬಾಬಾದ್ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿತ್ತು.
#Telangana– Bhadradri Kothagudem Traffic cops fined a tractor driver for no seat belt. The man apparently inquired with the showroom if they do provide seat belt for tractors, they said no.No words 😑pic.twitter.com/Bo5DWcJqw4
ಇದನ್ನೂ ಓದಿ:3 ಮಕ್ಕಳ ತಾಯಿಗೆ 7 ವರ್ಷದಿಂದ ಅಕ್ರಮ ಸಂಬಂಧ; ಪ್ರಿಯಕರ ಜತೆ ಇರಲಿ ಎಂದು ಟ್ರಾನ್ಸ್​ಫಾರ್ಮರ್​ ಏರಿದ ಮಹಿಳೆ
ಭದ್ರಾದ್ರಿ ಕೊತಗುಡೆಂ ಜಿಲ್ಲೆ ಪಲ್ವಂಚದಲ್ಲಿ ನಾಗಿರೆಡ್ಡಿ ಎಂಬಾತ ಎಂದಿನಂತೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾನೆ. ಈತನನ್ನು ತಡೆದ ಪೊಲೀಸರು 100 ರೂ. ದಂಡ ಕಟ್ಟುವಂತೆ ಸೂಚಿಸಿದ್ದಾರೆ. ಯಾವ ಕಾರಣಕ್ಕೆ ಎಂದು ರೈತ ಕೇಳಿದಾಗ ಸೀಟ್​ ಬೆಲ್ಟ್​ ಧರಿಸದೆ ಟ್ರ್ಯಾಕ್ಟರ್​ ಚಲಾಯಿಸಿದ ಕಾರಣ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾತನ್ನು ಕೇಳಿ ಗಾಬರಿಗೊಂಡ ರೈತ ಕೂಡಲೇ ಟ್ರ್ಯಾಕ್ಟರ್​ ಶೋರೂಮ್​ಗೆ ಕರೆ ಮಾಡಿದ್ದು, ಟ್ರ್ಯಾಕ್ಟರ್ ಗೆ ಸೀಟ್ ಬೆಲ್ಟ್ ಯಾಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾನೆ. ಈ ವಿಚಿತ್ರ ಘಟನೆ ಎಲ್ಲರ ಗಮನ ಸೆಳೆದಿದ್ದು, ಪೊಲೀಸರ ನಡೆಗೆ ಕಿಡಿಕಾರಿದ್ದಾರೆ. ಈ ಹಿಂದೆ ಮಹಬೂಬಾಬಾದ್ ಜಿಲ್ಲೆಯ ಸೀತಾನಗರಂ ಗ್ರಾಮದ ಟ್ರ್ಯಾಕ್ಟರ್ ಚಾಲಕನಿಗೆ ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ಹಾಕಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
