ಲಖನೌ:ಡಾ.ಬಿ.ಆರ್. ಅಂಬೇಡ್ಕರ್​ ಅವರ ಪ್ರತಿಮೆಯನ್ನು ತೆರವು ಮಾಡಲು ಮುಂದಾದ ಪೊಲೀಸ್​ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆದು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಸಂಬಮಧ ಮೂವರು ಮಹಿಳೆಯರು ಸೇರಿದಂತೆ 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್​ ಅಧಿಕಾರಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಭದೋಹಿ ಪೊಲೀಸ್​ ಠಾಣಾಧಿಕಾರಿ ಭುವನೇಶ್ವರ್​ ಕುಮಾರ್ ಪಾಂಡೆ ಮುಶಿಲಾತ್​ಪುರದ ಕೊತ್ವಾಲಿ ಪ್ರದೇಶದಲ್ಲಿ ಸರ್ಕಾರಿ ಕೊಳಕ್ಕಾಗಿ ನಿಗದಿಪಡಿಸಿದ್ದ ಜಾಗದಲ್ಲಿ ಅಲ್ಲಿನ ನಿವಾಸಿಗಳು ರಾತ್ರೋ ರಾತ್ರಿ ಅಂಬೇಡ್ಕರ್​ ಪ್ರತಿಮೆಯನ್ನು ನಿರ್ಮಿಸಿದ್ದಾರೆ.
ಇದನ್ನೂ ಓದಿ:ಪ್ರತಿಷ್ಠಿತ ಶಾಲೆಯಲ್ಲಿ ಸೀಟ್​ ಪಡೆಯಲು PMO ಅಧಿಕಾರಿಯಂತೆ ಪೋಸ್​ ನೀಡಿದ ವ್ಯಕ್ತಿ!
ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರತಿಮೆಯನ್ನು ತೆರವುಗೊಳಿಸುವಂತೆ ಸೂಚಿಸಲಾಯಿತು. ಆದರೆ, ಅಲ್ಲಿನ ನಿವಾಸಿಗಳು ಇದಕ್ಕೆ ವಿರೋಧಿಸಿದ್ದರು ಮತ್ತು ಪ್ರತಿಭಟಿಸಲು ಶುರು ಮಾಡಿದ್ದರು. ಆಗ ಅಧಿಕಾರಿಗಳ ತಂಡೆ ಪ್ರತಿಮೆಯನ್ನು ತೆರವು ಮಾಡಲು ಮುಂದಾದಾಗ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ಧಾರೆ.
ಪ್ರಕರಣ ಸಂಬಂಧ ಮೂವರು ಮಹಿಳೆಯರು ಸೇರಿದಂತೆ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ಜನರನ್ನು ಬಂಧಿಸಲಾಗುವುದು. ಪರಾರಿಯಾಗಿರುವ ಇತರರಿಗಾಗಿ ಶೋಧ ಕಾರ್ಯ ನಡೆದಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭದೋಹಿ ಪೊಲೀಸ್​ ಠಾಣಾಧಿಕಾರಿ ಭುವನೇಶ್ವರ್​ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eighteen =
Remember me
