ಬೆಂಗಳೂರು:ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಏಳು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.ಅವುಗಳ ಪೈಕಿ ಐದು ಪ್ರಕರಣ ಕಲಬುರಗಿ ಒಂದರಿಂದಲೇ ಬಂದಿದೆ. ಇನ್ನೆರಡು ಪ್ರಕರಣ ಬೆಂಗಳೂರು ನಗರದಲ್ಲಿ ಪತ್ತೆಯಾಗಿದೆ. ಕಲಬುರಗಿಯಲ್ಲಿ ನಾಲ್ಕು ತಿಂಗಳ ಗಂಡು ಶಿಶು ಸೇರಿದಂತೆ 28, 35 ಮತ್ತು 46 ವಯಸ್ಸಿನ ಮೂವರು ಮಹಿಳೆಯರು ಹಾಗೂ 57 ವರ್ಷದ ಓರ್ವ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು ನಗರದಲ್ಲಿ 28 ವರ್ಷದ ಯುವತಿ ಹಾಗೂ 54 ವರ್ಷದ ಪುರುಷನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕುಪೀಡಿತರಾದವರ ಸಂಖ್ಯೆ 425ಕ್ಕೆ ಏರಿದ್ದು, ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 15 ಮಂದಿ ಗುಣಮುಖರಾಗಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ ಒಟ್ಟು 129.ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 5 =
Remember me
