ಬೆಂಗಳೂರು:ರಾಜ್ಯದಲ್ಲಿ ಇನ್ನೇನು ಕರೊನಾ ಸೋಂಕು ತಗ್ಗುತ್ತಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲೇ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 45 ಹೊಸ ಪ್ರಕರಣಗಳು ಬೆಳಕಿಗೆ ಬಂದು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಈ ಪೈಕಿ 24 ಮಂದಿ ಬಾಲಕಿಯರು ಹಾಗೂ ಮಹಿಳೆಯರಾಗಿದ್ದರೆ, 21 ಮಂದಿ ಬಾಲಕರು ಹಾಗೂ ಪುರುಷರು.
ಅದರಲ್ಲಿಯೂ ನಾಲ್ಕು ನಗರಗಳ ಸ್ಥಿತಿ ಅಯೋಮಯವಾಗಿದೆ. ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನದವರೆಗೆ ಅಂದರೆ ಕೆಲವೇ ಗಂಟೆಗಳಲ್ಲಿ ದಾವಣಗೆರೆಯಲ್ಲಿ 14 ಪ್ರಕರಣಗಳು ಈ ಅವಧಿಯಲ್ಲಿ ದಾಖಲಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಇಬ್ಬರು ಹೆಂಡಿರ ನಡುವೆ ತಬ್ಬಿಬ್ಬಾದ ತಬ್ಲಿಘಿ- ಸುಮ್ಮನಿರದೇ ಇರುವೆ ಬಿಟ್ಟುಕೊಂಡವ ಈಗ ಏನಾದ!
ಬೆಳಗಾವಿಯಲ್ಲಿ 11 , ಬೆಂಗಳೂರು ನಗರದಲ್ಲಿ 7 ಹೊಸ ಸೋಂಕಿತರನ್ನು ಪತ್ತೆ ಮಾಡಲಾಗಿದೆ. ಉಳಿದಂತೆ ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ.
ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿದೆ. ಈ ಪೈಕಿ 371 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ ಇಲ್ಲಿಯವರೆಗೆ ಮೃತಪಟ್ಟವರು 30 ಮಂದಿ.ಮತ್ತೊಂದು ಆಘಾತಕಾರಿ ವರದಿ ಎಂದರೆ, ನಿನ್ನೆಯಿಂದ ಪತ್ತೆಯಾಗಿರುವವರ ಪೈಕಿ ಹೆಚ್ಚಿನವರು 40 ವರ್ಷಕ್ಕಿಂತ ಕಡಿಮೆ ವಯೋಮಾನದವರು. ದಾವಣಗೆರೆಯಲ್ಲಿ 3, 8, 11 ವರ್ಷದ ಮಕ್ಕಳಿಗೂ ಸೋಂಕು ತಗುಲಿದ್ದರೆ. ಭಟ್ಕಳದಲ್ಲಿ 5 ತಿಂಗಳ ಶಿಶು, 3 ಮತ್ತು 12 ವರ್ಷದ ಮಕ್ಕಳನ್ನೂ ಕರೊನಾ ಬಿಟ್ಟಿಲ್ಲ.
ಇದನ್ನೂ ಓದಿ:ಪಾಲಕರೇ ಎಚ್ಚರ! ಪೌರಾಣಿಕ ಧಾರಾವಾಹಿ ನೋಡುವ ಮಕ್ಕಳು ಹೀಗೆಲ್ಲಾ ಮಾಡ್ತಿದ್ದಾರೆ…
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಇದನ್ನೂ ಓದಿ:ಕರೊನಾ ಕಾರ್​ ಬಂದೇ ಬಿಡ್ತು- ಬಾಲಿವುಡ್​ಗೆ ಎಂಟ್ರಿ ಕೊಟ್ಟಾಯ್ತು. ನಿಮಗೂ ಬೇಕಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + sixteen =
Remember me
