ನವದೆಹಲಿ:ಭಾರತದಲ್ಲಿ ಕರೊನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ. ಗುಣಮುಖರಾದವರ ಪ್ರಮಾಣವೂ ಹೆಚ್ಚಾಗಿದ್ದು 2.18 ಲಕ್ಷ ಜನರು ಸೋಂಕಿನಿಂದ ಚೇತರಿಸಿ ಕೊಂಡಿದ್ದಾರೆ. ಮೃತರ ಸಂಖ್ಯೆ 13 ಸಾವಿರ ದಾಟಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 1.24 ಲಕ್ಷ ಪ್ರಕರಣ ಪತ್ತೆಯಾಗಿದೆ. ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 56 ಸಾವಿರ, ದೆಹಲಿ 53 ಸಾವಿರ ಪ್ರಕರಣಗಳು ಪತ್ತೆಯಾಗಿದೆ. ಗುಜರಾತ್ 26 ಸಾವಿರ, ಉತ್ತರ ಪ್ರದೇಶ 17 ಸಾವಿರ, ರಾಜಸ್ಥಾನ 14,300, ಪಶ್ಚಿಮ ಬಂಗಾಳ 13 ಸಾವಿರ, ಮಧ್ಯಪ್ರದೇಶ 11,700 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 5,800, ದೆಹಲಿ 2 ಸಾವಿರ, ಗುಜರಾತ್​ನಲ್ಲಿ 1,600 ಜನರು ಮೃತರಾಗಿದ್ದಾರೆ.
ವೈದ್ಯಕೀಯ ಸಿಬ್ಬಂದಿ ರಜಾ ರದ್ದು:ರಜೆಯಲ್ಲಿರುವ ರಾಜ್ಯದ ಎಲ್ಲ ಆಸ್ಪತ್ರೆಗಳ ಮತ್ತು ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ. ತುರ್ತು ಪರಿಸ್ಥಿತಿ ಇರುವವರಿಗೆ ಮಾತ್ರ ರಜೆ ನೀಡುವಂತೆ ತಿಳಿಸಲಾಗಿದೆ.
ಇದನ್ನೂ ಓದಿ;ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕರೊನಾ ಸೋಂಕಿಲ್ಲ; ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ
ಅಪಾಯಕಾರಿ ಮಟ್ಟದಲ್ಲಿ ಕರೊನಾ: ಕರೊನಾ ವೈರಸ್ ವಿಶ್ವದಲ್ಲಿ ಅಪಾಯಕಾರಿ ಮಟ್ಟದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲು್ಯಎಚ್​ಒ) ಎಚ್ಚರಿಕೆ ನೀಡಿದೆ. ಲಾಕ್​ಡೌನ್ ಸಮಯದಲ್ಲಿ ಸಾರ್ವಜನಿಕರು ಮನೆಯಲ್ಲಿದ್ದು ಬೇಸತ್ತಿದ್ದಾರೆ. ಆದರೆ ಈ ಸಮಯದಲ್ಲಿ ಕರೊನಾ ನಮ್ಮನ್ನು ಬಿಟ್ಟು ತೊಲಗಿಲ್ಲ. ಅದು ತನ್ನ ವೇಗವನ್ನು ಹೆಚ್ಚಿಸಿಕೊಂಡು ವಿಶ್ವದಾದ್ಯಂತ ಹರಡುತ್ತಿದೆ ಎಂದು ಡಬ್ಲು್ಯಎಚ್​ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘಬ್ರೆಯೆಸಸ್ ತಿಳಿಸಿದ್ದಾರೆ.
1,200 ವೈದ್ಯಕೀಯ ಸಿಬ್ಬಂದಿಗೆ ಕರೊನಾ:ರಾಷ್ಟ್ರ ರಾಜಧಾನಿಯಲ್ಲಿ ಮಾರ್ಚ್​ನಿಂದ ಇದುವರೆಗೆ 1,200ಕ್ಕೂ ಹೆಚ್ಚು ವೈದ್ಯರು ಮತ್ತು ನರ್ಸ್​ಗಳಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕರೊನಾ ಚಿಕಿತ್ಸೆಗೆ ನಿಗದಿ ಪಡಿಸಲಾಗಿರುವ 9 ಸರ್ಕಾರಿ ಆಸ್ಪತ್ರೆಗಳು ಮತ್ತು ಇತರ ಖಾಸಗಿ ಆಸ್ಪತ್ರೆಗಳ ವರದಿಯನ್ನು ಆಧರಿಸಿ ಈ ವರದಿ ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ;ಕರೊನಾಗೆ ಸಜ್ಜಾಯ್ತು ದೇಶೀಯ ಔಷಧ; ಮುಂಬೈ ಕಂಪನಿಗೆ ಡಿಸಿಜಿಐ ಸಮ್ಮತಿ
ಡೆಲಿವರಿ ಬಾಯ್​ಗಳ ಮೇಲೆ ನಿಗಾ:ಚೀನಾದ ರಾಜಧಾನಿ ಬೀಜಿಂಗ್​ನಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಕಾರಣ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಡೆಲಿವರಿ ಬಾಯ್ಗಳ ಮೇಲೆ ಹೆಚ್ಚಿನ ನಿಗಾ ವಹಿಸುವುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲ ಡೆಲಿವರಿ ಬಾಯ್ಗಳನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಒಂದೇ ದಿನ 14,700 ಪ್ರಕರಣ:ದೇಶದಲ್ಲಿ ಶುಕ್ರವಾರ ಒಂದೇ ದಿನದಲ್ಲಿ 14,712 ಪ್ರಕರಣಗಳು ಪತ್ತೆಯಾಗಿವೆ. 366 ಸೋಂಕಿತರು ಸಾವನ್ನಪ್ಪಿ ದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ವಿಶ್ವದಲ್ಲಿ ಏಕದಿನ ಏರಿಕೆಯಲ್ಲಿ 55 ಸಾವಿರ ಪ್ರಕರಣಗಳೊಂದಿಗೆ ಬ್ರೆಜಿಲ್ 1ನೇ ಸ್ಥಾನ, 33 ಸಾವಿರದೊಂದಿಗೆ ಅಮೆರಿಕ 2ನೇ ಸ್ಥಾನ, 14,700 ಪ್ರಕರಣದೊಂದಿಗೆ ಭಾರತ ಮೂರನೇ ಸ್ಥಾನದಲ್ಲಿದೆ.

ಕರೊನಾದ ಸಾವಿನ ಕುಣಿಕೆಯಿಂದ ಪಾರು ಮಾಡುತ್ತಿದೆ ಈ ಔಷಧ…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − one =
Remember me
