ನವದೆಹಲಿ:ಅಮೆರಿಕ, ಐರೋಪ್ಯ ದೇಶಗಳು ಸೇರಿ ವಿಶ್ವದ ಹಲವು ಭಾಗಗಳಲ್ಲಿ ಕರೊನಾ ಮತ್ತೆ ತೀವ್ರಗೊಳ್ಳುತ್ತಿರುವ ನಡುವೆಯೇ ಭಾರತದಲ್ಲಿ ವೈರಸ್ ಅಟ್ಟಹಾಸ ಹತೋಟಿಗೆ ಬರುತ್ತಿದೆ. ದೇಶದಲ್ಲಿ ಸತತ 8ನೇ ದಿನ 50 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿದ್ದು, ಗುಣಮುಖರ ಪ್ರಮಾಣ ವೇಗವಾಗಿ ಏರಿಕೆಯಾಗುತ್ತಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿಲ್ಲ. ಶನಿವಾರ 41 ಸಾವಿರ ಹೊಸ ಪ್ರಕರಣಗಳು ವರದಿಯಾಗಿದ್ದು, 450 ಮಂದಿ ಸಾವನ್ನಪ್ಪಿದ್ದಾರೆ. 42 ಸಾವಿರಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಚೇತರಿಸಿಕೊಂಡವರ ಒಟ್ಟು ಸಂಖ್ಯೆ 82.03 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನೂ 4.79 ಲಕ್ಷ ಸಕ್ರಿಯ ಪ್ರಕರಣಗಳಿವೆ.
ದೆಹಲಿಯಲ್ಲಿ ಕರೊನಾ 3ನೇ ಅಲೆ ವಿಕೋಪಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಸಂಜೆ ತುರ್ತಸಭೆ ನಡೆಸಿ ಪರಿಸ್ಥಿತಿಯ ವರದಿ ಪಡೆದಿದ್ದಾರೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮತ್ತುಸ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ದಾಖಲೆ ಪ್ರಮಾಣದಲ್ಲಿ ಸೋಂಕು ಹಾಗೂ ಸಾವು ವರದಿಯಾಗುತ್ತಿವೆ. ಕೇರಳದಲ್ಲೂ ಕರೊನಾ ಮತ್ತೆ ಉಲ್ಬಣಗೊಂಡಿದ್ದು, ಅಲ್ಲಿ ಸೋಂಕು ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
