ನವದೆಹಲಿ:ಕರೊನಾ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ರಾಜ್ಯಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜಿಬಿಎಲ್‌ ನರಸಿಂಹರಾವ್‌ ಕೇಳಿದ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿ, ”ಕರೊನಾದಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಒಂದು ದೊಡ್ಡ ಸವಾಲಾಗಿತ್ತು. ಕೆಲಸಗಾರರ ಪೈಕಿ ಯಾರಗಾದರು ಕರೊನಾ ಸೋಂಕು ತಗುಲಿದರೆ ಇಡೀ ಪ್ಯಾಕ್ಟರಿಯನ್ನೇ ಮುಚ್ಚಬೇಕಾದ ಸ್ಥಿತಿ ಇತ್ತು. ಸಾಗಣೆ ಮಾಡುವಾಗ, ಲೋಡ್‌- ಅನ್‌ಲೋಡ್‌ ಮಾಡುವಾಗ ಕಾರ್ಮಿಕರ ಕೊರತೆ ಎದುರಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನಿಭಾಯಿಸಲಾಯಿತು. ಅತಿವೃಷ್ಟಿಯಿಂದ ಕೆರೆಗಳು, ಜಲಾಶಯಗಳು ತುಂಬಿದವು. ಬಿತ್ತನೆ ಪ್ರದೇಶ ವೃದ್ಧಿಸಿ ರಸಗೊಬ್ಬರ ಬೇಡಿಕೆ ಹೆಚ್ಚಾಯಿತು. ಬೇಡಿಕೆಯನ್ನು ಪೂರೈಸಿ ಎಲ್ಲಿಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿ ವಲಯ ಶೇಕಡಾ 3.7 ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು” ಎಂದು ವಿವರಿಸಿದರು.
ಇದಕ್ಕೆ ಮೊದಲು ವಿಜಯಸಾಯಿರೆಡ್ಡಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, “ಪ್ರತಿ ಹಂಗಾಮು ಶುರುವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿಯೇ ಇಲಾಖೆ ಪ್ರತಿ ರಾಜ್ಯಗಳ ಬೇಡಿಕೆ ವಿವರ ಪಡೆದು ಅದರ ಪ್ರಕಾರವೇ ವಿವಿಧ ನಮೂನೆಯ ರಸಗೊಬ್ಬರಗಳ ಸರಬರಾಜಿಗೆ ವ್ಯವಸ್ಥೆ ಮಾಡುತ್ತದೆ. ಪ್ರತಿ ವಾರವೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಎಲ್ಲ ರಾಜ್ಯಗಳ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಯಾವ ರಾಜ್ಯಗಳಲ್ಲಿ ಯಾವ ನಮೂನೆಯ ರಸಗೊಬ್ಬರ ಎಷ್ಟೆಷ್ಟು ಇವೆ ಎಂಬುದನ್ನು ಆನ್ಲೈನ್‌ ಡ್ಯಾಷ್‌ಬೋರ್ಡ್- ಸಂಯೋಜಿತ ರಸಗೊಬ್ಬರ ಪರಿಶೀಲನಾ ವ್ಯವಸ್ಥೆ (ಐಎಫ್‌ಎಂಎಸ್) ಮೂಲಕ ಪ್ರತಿದಿನವೂ ಪರಿಶೀಲಿಸಲಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಲಾಗುತ್ತದೆ” ಎಂದು ವಿವರಿಸಿದರು. ಸಭಾಪತಿ ಪೀಠದಲ್ಲಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕರೊನಾ ಮಧ್ಯೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡ ಸದಾನಂದಗೌಡರನ್ನು ಅಭಿನಂದಿಸಿದರು.
ರಾಮ ಮಂದಿರದ ಹೆಸರಲ್ಲಿ ವಂಚಿಸುತ್ತಿದ್ದ ದುಷ್ಕರ್ಮಿಗಳ ಬಂಧನ

ಬರ್ತಡೇ ಪಾರ್ಟಿ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಕೋಮು ತಿರುವು ಪಡೆದ ಪ್ರಕರಣ

ನಟ ಸತ್ಯಜಿತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಮಗಳು! ಹಿರಿಜೀವದ ಮೇಲೆ ಆರೋಪಗಳ ಸುರಿಮಳೆ

ರಾಜ್ಯಸಭಾ ಪ್ರತಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nineteen =
Remember me
