ನವದೆಹಲಿ: ಕರೊನಾ ಪೀಡಿತ ಓರ್ವ ವ್ಯಕ್ತಿಯಿಂದ ಉತ್ತರ ಪ್ರದೇಶದ 14 ಗ್ರಾಮಗಳನ್ನು ಸೀಲ್​ಡೌನ್​ ಮಾಡಲಾಗಿದೆ.
ಪ್ರಾರ್ಥನಾ ಮಂದಿರದಲ್ಲಿ ತಂಗಿದ್ದ, ಆಂಧ್ರ ಪ್ರದೇಶದ ವ್ಯಕ್ತಿಗೆ ಸೋಂಕು ಹರಡಿರುವುದು ದೃಢಪಟ್ಟ ನಂತರ ಆತ ವಾಸ ಮಾಡುತ್ತಿದ್ದ ಉತ್ತರ ಪ್ರದೇಶದ ಗ್ರಾಮದ ಸುತ್ತಲಿನ 14 ಹಳ್ಳಿಗ ಸೀಲ್​ ಮಾಡಲಾಗಿದೆ.
ಆಂಧ್ರಪ್ರದೇಶದ ವ್ಯಕ್ತಿ ಮಾರ್ಚ್​ನಲ್ಲಿ ದೆಹಲಿಯಲ್ಲಿ ನಡೆದ ನಿಜಾಮುದ್ದೀನ್​ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ತೆರಳಿದ ಅವರು ಉತ್ತರ ಪ್ರದೇಶದಲ್ಲಿದ್ದ ಮಸೀದಿಯಲ್ಲಿ ತಂಗಿದ್ದರು. ಅವರಿಗೆ ಸೋಂಕು ಹರಡಿರುವುದು ದೃಢಪಟ್ಟ ನಂತರ 14 ಗ್ರಾಮಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸೋಂಕು ಪೀಡಿತ ವ್ಯಕ್ತಿ ವಾಸಿಸುತ್ತಿದ್ದ ಹಳ್ಳಿಯಿಂದ ಮೂರು ಕಿಲೋ ಮೀಟರ್​ ಪ್ರದೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಸುತ್ತಲಿನ 14 ಗ್ರಾಮಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್​ ಪ್ರಶಾಂತ್​ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 483 ಮಂದಿಗೆ ಕರೊನಾ ವೈರಸ್​ ಸೋಂಕು ಹರಡಿದೆ. ಇವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)
ಮದ್ಯಕ್ಕಾಗಿ ಚಡಪಡಿಸಿ ಅಲ್ಕೋಹಾಲ್‌ಯುಕ್ತ ಔಷಧ ಕುಡಿದ ಯುವಕರಿಗೆ ಏನಾಯಿತು ಗೊತ್ತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
