ಅಯೋಧ್ಯೆ: ಅಯೋಧ್ಯೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ರಾಮನವಮಿ ಆಚರಣೆಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆಗಳನ್ನೂ ಮಾಡಿಕೊಳ್ಳುತ್ತಿದೆ. ಆದರೆ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಕರೊನಾದಿಂದಾಗಿ ರಾಮನವಮಿ ಆಚರಣೆ ಬಗ್ಗೆ ಆತಂಕ ಎದುರಾಗಿದೆ. ಏ. 2ರಂದು ನಡೆಯಲಿರುವ ರಾಮನವಮಿ ಆಚರಣೆಯಲ್ಲಿ ಸುಮಾರು 10 ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಅನುಜ್ ಕುಮಾರ್ ಝಾ ಹೇಳಿದ್ದಾರೆ. ಆದರೆ ಜನರ ಜೀವದ ಸುರಕ್ಷತೆ ನಿಟ್ಟಿನಲ್ಲಿ ರಾಮನವಮಿ ಆಚರಣೆಯನ್ನು ಕೈಬಿಡುವುದು ಸೂಕ್ತ ಎಂದು ಅಯೋಧ್ಯೆ ಮುಖ್ಯ ಆರೋಗ್ಯಾಧಿಕಾರಿ ಘನಶ್ಯಾಮ್ ಸಿಂಗ್ ಸಲಹೆ ನೀಡಿದ್ದಾರೆ.
ಕರೊನಾವೈರಸ್ ಕುರಿತ ನೋಡಲ್ ಅಧಿಕಾರಿ ಡಾ. ವಿಕಾಸ್ ಸೆನಡು ಕೂಡ ಕಾರ್ಯಕ್ರಮದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಹೆಚ್ಚು ಜನರು ಗುಂಪು ಸೇರುವುದು ತುಂಬ ಅಪಾಯಕಾರಿ ಎಂದಿದ್ದಾರೆ. ನಾವು ಈಗಾಗಲೇ ರಾಜ್ಯದಲ್ಲಿ ಎಲ್ಲ ಮಾಲ್​ಗಳು, ಶಾಲೆ-ಕಾಲೇಜು ಸೇರಿ ಹೆಚ್ಚು ಜನ ಸೇರುವ ಸ್ಥಳಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಮನವಮಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸುಮಾರು 10 ಲಕ್ಷ ಭಕ್ತರೆಲ್ಲರೂ ಮಾಸ್ಕ್​ಗಳನ್ನು ಧರಿಸುತ್ತಾರೆ. ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಅಸಾಧ್ಯ ಎಂದಿದ್ದಾರೆ.
ಕರೊನಾ ವೈರಸ್​ ಸೋಂಕು ಹರಡುವಿಕೆ ರಾಷ್ಟ್ರದಲ್ಲಿ 2ನೇ ಹಂತದಲ್ಲಿದೆ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 2 =
Remember me
