ನವದೆಹಲಿ:ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳ ವಿಧಾನಸಭೆಗಳಿಗೆ ನಡೆಯುವ ಚುನಾವಣೆ ಕರೊನಾ ಸಾಂಕ್ರಾಮಿಕತೆ ಕಾರಣ ಮುಂದಕ್ಕೆ ಹೋಗುವ ಸಾಧ್ಯತೆಯಿಲ್ಲ ಎಂದು ಭಾರತ ಚುನಾವಣೆ ಆಯೋಗದ ಅಧಿಕಾರಿಗಳು ಸುಳಿವು ನೀಡಿದ್ದಾರೆ. ಹೆಚ್ಚುತ್ತಿರುವ ಒಮಿಕ್ರಾನ್ ಭೀತಿಯ ನಡುವೆ ದೇಶದ ಕೋವಿಡ್-19 ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಆಯೋಗ ಸೋಮವಾರ ಸಭೆ ನಡೆಸಿದ್ದು ಚುನಾವಣೆ ಮುಂದೂಡದಿರಲು ನಿರ್ಧರಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಸತೀಶ್ ಚಂದ್ರ ಮತ್ತು ಉಳಿದ ಆಯುಕ್ತರು ಚುನಾವಣಾ ಸಿದ್ಧತೆ ಪರಿಶೀಲಿಸಲು ಮಂಗಳವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಮುಂದಿನ ವಾರವೇ ವೇಳಾಪಟ್ಟಿಯನ್ನು ಪ್ರಕಟಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಚುನಾವಣೆ ಎದುರಾಗಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್​ಗಳಲ್ಲಿ ಲಸಿಕಾ ಅಭಿಯಾನವನ್ನು ಚುರುಕು ಗೊಳಿಸುವಂತೆಯೂ ಆಯೋಗ ಸೂಚಿಸಿದೆ ಎನ್ನಲಾಗಿದೆ.
ಜನವರಿಯಲ್ಲಿ ಮತ್ತೆ ಸಭೆ:ಐದು ರಾಜ್ಯಗಳಲ್ಲಿ ಕರೊನಾ ಸೋಂಕಿನ ಪರಿಸ್ಥಿತಿ ಕುರಿತು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಸೋಮವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತಿತರ ಅಧಿಕಾರಿಗಳೊಂದಿಗೆ ಒಂದು ತಾಸು ಸಮಾಲೋಚನೆ ನಡೆಸಿದರು. ಜನವರಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ರೂಪಾಂತರಿ ಒಮಿಕ್ರಾನ್ ಸಹಿತ ಕರೊನಾ ಮಹಾಮಾರಿ ಹೆಚ್ಚುತ್ತಿರುವುದರಿಂದ ಚುನಾವಣೆಯನ್ನು ಒಂದೆರಡು ತಿಂಗಳು ಮುಂದೂಡುವಂತೆ ಅಲಹಾಬಾದ್ ಹೈ ಕೋರ್ಟ್ ಗುರುವಾರ ಆಯೋಗಕ್ಕೆ ಮನವಿ ಮಾಡಿದ ನಂತರ ಈ ಸಭೆ ನಡೆದಿದೆ. ಮಾದಕದ್ರವ್ಯ ನಿಯಂತ್ರಣ ದಳ (ಎನ್​ಸಿಬಿ) ಅಧಿಕಾರಿಗಳೊಂದಿಗೂ ರ್ಚಚಿಸಿದ ಆಯೋಗ, ಚುನಾವಣೆಯಲ್ಲಿ ಮಾದಕವಸ್ತುಗಳ ಪರಿಣಾಮ ತಡೆಯುವಂತೆ ಸೂಚಿಸಿದೆ. ಭಾರತ-ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ), ಗಡಿ ಭದ್ರತಾ ಪಡೆ (ಬಿಎಸ್​ಎಫ್) ಮತ್ತು ಸೀಮಾ ಸುರಕ್ಷಾ ಬಲದ (ಎಸ್​ಎಸ್​ಬಿ) ಉನ್ನತ ಅಧಿಕಾರಿಗಳೊಂದಿಗೂ ಚುನಾವಣೆ ಆಯೋಗದ ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಕೊನೆಗೂ ಹೊರಬಿತ್ತು ಪುನೀತ್ ರಾಜಕುಮಾರ್ ಡೈರಿಯಲ್ಲಿದ್ದ ಆ ನಿರ್ಮಾಪಕರ ಹೆಸರು!
ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್​ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
