ರಾಂಚಿ:ಕರೊನಾ ಸೋಂಕಿಗೆ ತುತ್ತಾದ ವ್ಯಕ್ತಿಯೊಬ್ಬ ರಾತ್ರಿಯೆಲ್ಲ ನರಳಾಡಿ, ಬೆಳಗ್ಗೆ ಎನ್ನುವಷ್ಟೊತ್ತರಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್​ನ ಗರ್ವಾದಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಆತ ಏಪ್ರಿಲ್​ 14ರಂದು ಆಸ್ಪತ್ರೆಗೆ ದಾಖಲಾಗಿದ್ದ. ವಿಪರೀತ ಅನಾರೋಗ್ಯದಿಂದ ಬಳಲುತ್ತಿದ್ದ ಆತ ಪ್ರತಿದಿನ ರಾತ್ರಿಯೂ ನರಳಾಡುತ್ತಿದ್ದು, ಬೇರೆ ರೋಗಿಗಳು ನಿದ್ರೆ ಮಾಡದಂತಾಗಿತ್ತಂತೆ. ಅದರಂತೆ ಸೋಮವಾರ ರಾತ್ರಿಯೂ ಆತ ನರಳಾಡಿದ್ದಾನೆ. ನೋವೆಂದು ಕೂಗಿಕೊಂಡಿದ್ದಾನೆ. ಅದಾದ ನಂತರ ವಾರ್ಡ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರೋಗಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆತ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದ. ಆದರೆ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣವೇನು ಎನ್ನುವುದು ಗೊಂದಲಮಯವಾಗಿದೆ. ಈ ವಿಚಾರವಾಗಿ ಹೆಚ್ಚಿನ ತನಿಖೆ ನಡೆಸುವುದಾಗಿ ಅಲ್ಲಿನ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಏರ್​ಪೋರ್ಟ್​ ಮೆಟ್ರೋ ಮಾರ್ಗಕ್ಕೆ ಕೇಂದ್ರದ ಅಸ್ತು!

ಕೇಜ್ರಿವಾಲ್​ ಪತ್ನಿಗೆ ಕರೊನಾ ಸೋಂಕು; ಕ್ವಾರಂಟೈನ್​ಗೆ ಒಳಗಾದ ಸಿಎಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 2 =
Remember me
