ಮಂಡ್ಯ:ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.
ಎರಡು ವಾರಗಳ ಹಿಂದೆ ಕಾಲು ಗಾಯಯೊಂಡು ಅನಾರೋಗ್ಯಕ್ಕೀಡಾಗಿದ್ದ ಕಾಮೇಗೌಡರಿಗೆ ತುರ್ತು ಚಿಕಿತ್ಸಾ ವಾಹನದಲ್ಲಿ ನಿತ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿ, ಮತ್ತೆ ಮನೆಗೆ ಬಿಡಲಾಗುತ್ತಿತ್ತು. ಮೂರು ದಿನಗಳ ಹಿಂದಷ್ಟೇ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದರಿಂದ ಮಂಡ್ಯದ ಕೋವಿಡ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
”ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒದಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಫೂರ್ತಿಯಾಗಿರುವ ಕಾಮೇಗೌಡರು ಶೀಘ್ರ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದಾರೆ.
ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
— Dr Sudhakar K (@mla_sudhakar)July 25, 2020

ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ.1/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)July 25, 2020

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕೂಡ, ”ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ” ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + two =
Remember me
