ಹೈದ್ರಾಬಾದ್​:ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಒಂದು ತಿಂಗಳ ಹಿಂದೆಯೇ ಮಿಲ್ಕಿಬ್ಯೂಟಿ ತಮನ್ನಾಗೆ ಕರೊನಾ ಸೋಂಕಿನ ಛಾಯೆ ಆವರಿಸಿತ್ತು. ಆಗಸ್ಟ್​ ಕೊನೇ ವಾರದಲ್ಲಿ ತಮನ್ನಾರ ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಸೋಂಕು ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ನಟಿಯೇ ತನ್ನ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ‘ಅಪ್ಪ-ಅಮ್ಮನಿಗೆ ಕರೊನಾ ಸೋಂಕು ತಗುಲಿದೆ. ನನ್ನ ವರದಿ ನೆಗೆಟಿವ್​ ಬಂದಿದೆ. ನನ್ನ ಪಾಲಕರು ಶೀಘ್ರವೇ ಗುಣಮುಖರಾಗಲಿದ್ದಾರೆ. ನೀವು ದೇವರಲ್ಲಿ ಪ್ರಾರ್ಥಿಸಿ’ ಎಂದು ಬರೆದುಕೊಂಡಿದ್ದರು. ಲಕ್ಷಾಂತರ ಅಭಿಮಾನಿಗಳು ಕೂಡ ನೆಚ್ಚಿನ ನಟಿಯ ಪಾಲಕರು ಶೀಘ್ರ ಗುಣವಾಗಲೆಂದು ಹಾರೈಸಿದ್ದರು.ಇದನ್ನೂ ಓದಿರಿಎಲ್ಲ ಪ್ರಜೆಗಳಿಗೂ ಕೋವಿಡ್​ಗೆ ಉಚಿತ ಲಸಿಕೆ ಕೊಡಲಿದೆ ಈ ದೇಶ!
ಇದಾದ ಒಂದು ತಿಂಗಳ ಬಳಿಕ ತಮನ್ನಾ ಅವರಲ್ಲಿ ಕರೊನಾ ರೋಗ ಲಕ್ಷಣ ಕಾಣಿಸಿಕೊಂಡುತ್ತು. ಈ ಹಿನ್ನೆಲೆಯಲ್ಲಿ ಟೆಸ್ಟ್​ ಮಾಡಿಸಿದ್ದು, ವರದಿಯು ಪಾಸಿಟಿವ್​ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೈದ್ರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಬಾಹುಬಲಿ ಖ್ಯಾತಿಯ ನಟಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್​ನಲ್ಲಿ ವೆಬ್ ಸರಣಿ ಚಿತ್ರಕ್ಕಾಗಿ ಇತ್ತೀಚಿಗೆ ಕೆಲ ದಿನಗಳಿಂದ ತಮನ್ನಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು.
ಈ ಫ್ಲೆಕ್ಸ್​ನಲ್ಲಿ ಗಾಂಧಿ-ಶಾಸ್ತ್ರಿ ಭಾವಚಿತ್ರ ಹುಡುಕಿಕೊಟ್ಟವರಿಗೆ ಬಹುಮಾನ!

PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
