ನವದೆಹಲಿ: ಕರೊನಾ ಸೋಂಕಿನಲ್ಲಿ ಇಳಿಕೆ ಕಾಣುತ್ತಿದ್ದ ದೆಹಲಿಯಲ್ಲಿ ಇದೀಗ ಮತ್ತೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 50 ಏರಿಕೆ ಕಂಡಿದ್ದು, ರಾಜ್ಯದಲ್ಲಿ ಸೋಂಕಿನ ಎರಡನೇ ಅಲೆ ಆರಂಭವಾಗಿದೆಯೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಎರಡನೇ ಅಲೆಯು ಮೊದಲ ಅಲೆಯಷ್ಟು ಪರಿಣಾಮ ಬೀರುವುದಿಲ್ಲ ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಮೊದಲ ಅಲೆಯ ಸಮಯದಲ್ಲಿ ವೈದ್ಯಕೀಯ ವಲಯಕ್ಕೆ ಅದು ದೊಡ್ಡ ಸಮಸ್ಯೆಯಾಗಿತ್ತು. ಆದರೆ ಈಗ ಹಾಗಿಲ್ಲ. ಸಕ್ರಿಯ ಪ್ರಕರಣಗಳಲ್ಲಿ ಬಹುಪಾಲು ಜನರಿಗೆ ರೋಗ ಲಕ್ಷಣಗಳಿಲ್ಲ. ಅತ್ಯಂತ ಕಡಿಮೆ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಹೋಂ ಐಸೋಲೇಷನ್ ಅತ್ಯಂತ ಯಶಸ್ವಿಯಾಗಿದೆ. ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದ್ದು, ಈ ಕಾಣಕ್ಕೆ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ ಎನ್ನಲಾಗಿದೆ.
ದಾಖಲೆಯ ಏರಿಕೆ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರುತ್ತಿದೆ. ಬುಧವಾರ ಒಂದೇ ದಿನದಲ್ಲಿ 83,880ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 38 ಲಕ್ಷದ ಗಡಿ ದಾಟಿದೆ. ಒಂದೇ ದಿನದಲ್ಲಿ 11.72 ಲಕ್ಷಕ್ಕೂ ಅಧಿಕ ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೈಕಲ್ ಸವಾರರಿಗೆ ಮಾಸ್ಕ್ ಬೇಕಿಲ್ಲ
ಒಬ್ಬಂಟಿಯಾಗಿ ಸೈಕಲ್ ಓಡಿಸುತ್ತಿದ್ದರೆ ಅಥವಾ ಒಬ್ಬರೇ ಕಾರು ಚಲಾಯಿಸುತ್ತಿದ್ದರೆ ಮಾಸ್ಕ್ ತೊಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸೈಕಲ್ ಸವಾರರು ಮತ್ತು ಕಾರು ಚಲಾಯಿಸುವವರು ಮಾಸ್ಕ್ ತೊಡಬೇಕು ಎಂದು ಯಾವುದೇ ಮಾರ್ಗಸೂಚಿಯಲ್ಲಿ ಹೇಳಿಲ್ಲ ಅಥವಾ ಅದಕ್ಕೆಂದು ಮಾರ್ಗಸೂಚಿ ಮಾಡಿಲ್ಲ. ಆದರೆ ಗುಂಪಾಗಿ ಸೈಕಲ್ ಓಡಿಸುವಾಗ ಮಾಸ್ಕ್ ತೊಡುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಶೇ. 62 ಪ್ರಕರಣ
ದೇಶದ ಒಟ್ಟು ಕರೊನಾ ಪ್ರಕರಣಗಳ ಸಂಖ್ಯೆಯಲ್ಲಿ ತಮಿಳುನಾಡು, ಉತ್ತರ ಪ್ರದೇಶ, ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲೇ ಶೇ. 62 ಸೋಂಕು ಪತ್ತೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
