ನವದೆಹಲಿ:ದಿನದಿಂದ ದಿನಕ್ಕೆ ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ನಡುವೆಯೇ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರಿಗೂ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
ಕರೊನಾ ಸೋಂಕಿನ ಲಕ್ಷಣಗಳು ಕಂಡುಬಂದ ಕಾರಣ, ಇದಾಗಲೇ ಸ್ವಯಂ ಗೃಹಬಂಧನದಲ್ಲಿ ಇರುವ ಕೇಜ್ರಿವಾಲ್​ ಇಂದು ಬೆಳಗ್ಗೆ ತಪಾಸಣೆ ಮಾಡಿಸಿಕೊಂಡು ಬಂದಿದ್ದಾರೆ. ಇಂದು ಸಂಜೆಯ ವೇಳೆಗೆ ವರದಿ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ:ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು: ಎಲ್ಲರೂ ಪಾಸ್​ ಎಂದ ಸರ್ಕಾರ
ಪರೀಕ್ಷೆ ಕುರಿತಂತೆ ಮಾಹಿತಿ ನೀಡಿರುವ ವೈದ್ಯರು, ಕರೊನಾ ಲಕ್ಷಣ ಕಂಡುಬಂದ ಪರಿಣಾಮ ಕೇಜ್ರಿವಾಲ್ ಅವರನ್ನು ಪರೀಕ್ಷೆಗೆ ಗುರಿಪಡಿಸಲಾಗಿದ್ದು, ಶೀಘ್ರದಲ್ಲೇ ವರದಿ ಬರಲಿದೆ ಎಂದು ಹೇಳಿದ್ದಾರೆ. ಆದರೆ ಸದ್ಯ ಜ್ವರದ ತಾಪಮಾನ ತಗ್ಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇಜ್ರಿವಾಲ್‌ ಅವರಿಗೆ ಜ್ವರದ ಜತೆ ಗಂಟಲಿನಲ್ಲಿ ಕೆರೆತವೂ ಉಂಟಾಗಿದೆ. ಮಧು­ಮೇಹ ರೋಗಿಯಾಗಿರುವ ಅವ­ರನ್ನು ತಕ್ಷಣದಲ್ಲೇ ಕ್ವಾರಂಟೈನ್‌ಗೆ ತೆರಳಿ, ಪರೀಕ್ಷೆ ನಡೆಸುವಂತೆ ಕೋರಿದ್ದರು.
ಈ ನಡುವೆ ದೆಹಲಿಯಲ್ಲಿ ಒಟ್ಟು 27,654 ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ 10,664 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದಾಗಲೇ 761 ಮಂದಿ ದೆಹಲಿಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ಕೆಸರು ಎರಚಿದಷ್ಟೂ ಕಮಲದ ಹೂವು ಸುಂದರವಾಗಿ ಅರಳಲಿದೆ- ದೀದೀಗೆ ಷಾ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 20 =
Remember me
