ಪಟನಾ:ಇಡೀ ದೇಶದಲ್ಲಿ ಹಿರಿಯ ನಾಗರೀಕರಿಗೆ ಮತ್ತು ತೀವ್ರ ಖಾಯಿಲೆಗಳುಳ್ಳ 45 ವರ್ಷದ ಮೇಲ್ಪಟ್ಟವರಿಗೆ ಕರೊನಾ ಲಸಿಕಾ ಅಭಿಯಾನ ಇಂದು ವಿದ್ಯುಕ್ತವಾಗಿ ಆರಂಭವಾಗಿದೆ. ಎಲ್ಲಾ ಸರಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ದೊರೆಯಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲಿಚ್ಛಿಸುವವರಿಗೆ 250 ರೂಪಾಯಿ ಶುಲ್ಕ ವಿಧಿಸಬಹುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಆದರೆ ಬಿಹಾರದ ಜನರಿಗೆ ಮಾತ್ರ ಸರ್ಕಾರಿ ಕೇಂದ್ರಗಳೊಂದಿಗೆ, ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿಯೇ ಕರೊನಾ ಲಸಿಕೆ ಪಡೆಯುವ ಅವಕಾಶ ದೊರೆಯಲಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, “ಇಡೀ ಬಿಹಾರ ರಾಜ್ಯದಲ್ಲಿ ಕರೊನಾ ಲಸಿಕೆಯು ಪೂರ್ಣ ಉಚಿತವಾಗಿ ದೊರೆಯಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಹ ಈ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸುತ್ತದೆ” ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ:2ನೇ ಹಂತದ ಕರೊನಾ ಲಸಿಕೆ ಅಭಿಯಾನ : ಇಲ್ಲಿದೆ, ನಿಮ್ಮ ಪ್ರಶ್ನೆಗಳಿಗೆ ಉತ್ತರ
ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯ ವೇಳೆ ಮತದಾರರಿಗೆ ನೀಡಿದ್ದ ವಾಗ್ದಾನದಂತೆ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎನ್ನಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನಾಷನಲ್ ಡೆಮೊಕ್ರೆಟಿಕ್ ಅಲೆಯನ್ಸ್ (ಎನ್​ಡಿಎ) 243 ಸೀಟುಗಳಲ್ಲಿ 125 ಸೀಟುಗಳನ್ನು ಗೆದ್ದು ಬಹುಮತ ಸಾಧಿಸಿತ್ತು. ಕರೊನಾ ಲಸಿಕೆ ಲಭ್ಯವಾದಾಗ ಅದನ್ನು ಉಚಿತವಾಗಿ ಒದಗಿಸಬೇಕೆಂಬ ಪ್ರಸ್ತಾವನೆಯನ್ನು ಬಿಹಾರ ಸಂಪುಟವು ಡಿಸೆಂಬರ್​ನಲ್ಲಿ ಅನುಮೋದಿಸಿತ್ತು.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

2ನೇ ಹಂತದ ಕರೊನಾ ಲಸಿಕೆ ಅಭಿಯಾನ : ಇಲ್ಲಿದೆ, ನಿಮ್ಮ ಪ್ರಶ್ನೆಗಳಿಗೆ ಉತ್ತರ

“ಮೋದಿಗೆ ತಮಿಳುನಾಡು ಟಿವಿ ಥರ… ರಿಮೋಟ್​ನಿಂದ ಸಿಎಂನ ಕಂಟ್ರೋಲ್ ಮಾಡ್ತಾರೆ !”

“ರಾಹುಲ್ ಭೈಯಾ… ನೀವಾಗ ರಜೆಯ ಮೇಲಿದ್ದಿರಿ… ಅದಕ್ಕೆ ನಿಮಗೆ ಗೊತ್ತಿಲ್ಲ”

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
