ತಿರುವನಂತಪುರಂ:ಭಾರತವೂ ಸೇರಿ ಜಗತ್ತಿನಾದ್ಯಂತ ಕರೊನಾ ಲಸಿಕೆ ಕುರಿತ ಸಂಶೋಧನೆ ಹಾಗೂ ಪ್ರಯೋಗಗಳು ನಡೆಯುತ್ತಿದ್ದರೂ, ಭಾರತದಲ್ಲಿ ಇನ್ನೂ ಲಸಿಕೆ ಸಂಬಂಧ ಯಾವುದೇ ಅಂತಿಮ ಅನುಮತಿ ಲಭಿಸಿಲ್ಲ. ಇನ್ನೊಂದೆಡೆ ಕರೊನಾ ಲಸಿಕೆಯನ್ನು ರಾಜ್ಯದಲ್ಲಿ ಉಚಿತವಾಗಿ ಒದಗಿಸಲಾಗುವುದು ಎಂದು ಲಸಿಕೆ ಬಿಡುಗಡೆ ಆಗುವುದಕ್ಕೆ ಮುಂಚೆಯೇ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 59,690 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 5,949 ಮಂದಿಯಲ್ಲಿ ಕೋವಿಡ್​-19 ಸೋಂಕು ದೃಢಪಟ್ಟಿದೆ. ಇನ್ನು 5,268 ಸೋಂಕುಮುಕ್ತರಾಗಿ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಪ್ರಮಾಣ 6,01,861 ತಲುಪಿದೆ. ಮತ್ತೊಂದೆಡೆ 60,029 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಶನಿವಾರ ತಿಳಿಸಿದ್ದಾರೆ.
ಶನಿವಾರವೊಂದೇ ದಿನ 32 ಜನ ಕರೊನಾದಿಂದಾಗಿ ಮೃತಪಟ್ಟಿದ್ದು, ಇದುವರೆಗೆ ಕೋವಿಡ್​-19 ಸೋಂಕಿನಿಂದಾಗಿ ಸತ್ತಿರುವವರ ಸಂಖ್ಯೆ 2,594ಕ್ಕೆ ತಲುಪಿದೆ. ಅಲ್ಲದೆ ರಾಜ್ಯದಲ್ಲಿ ಇನ್ನೂ 437 ಹಾಟ್​ಸ್ಪಾಟ್​ಗಳಿವೆ ಎಂದು ಮಾಹಿತಿ ನೀಡಿರುವ ಅವರು, ಕರೊನಾ ಲಸಿಕೆ ಲಭ್ಯವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲರಿಗೂ ಉಚಿತವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)
ವಿಷ್ಣುವರ್ಧನ್ ಬಗ್ಗೆ ಕೀಳುಮಟ್ಟದ ಹೇಳಿಕೆ; ತೆಲುಗು ನಟನ ವಿರುದ್ಧ ಸಿಡಿದೆದ್ದ ಚಂದನವನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
