ನವದೆಹಲಿ: ರಾಷ್ಟ್ರದಲ್ಲಿ ಕಳೆದ 24 ತಾಸಿನಲ್ಲಿ 46 ಮಂದಿ ಕರೊನಾ ವೈರಸ್​ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಷ್ಟ್ರದಲ್ಲಿ ಕರೊನಾ ವೈರಸ್​ ಹರಡುವಿಕೆ ತೀವ್ರವಾಗಿದ್ದು ಒಂದೇ ದಿನ 809 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 25 ಮಂದಿ, ದೆಹಲಿಯಲ್ಲಿ 3, ಗುಜರಾತ್​ ಹಾಗೂ ಜಾರ್ಖಂಡ್​ ರಾಜ್ಯಲ್ಲಿ ತಲಾ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ರಾಷ್ಟ್ರದಲ್ಲಿ ಕರೊನಾ ವೈರಸ್​ಗೆ ಒಟ್ಟು 199 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 6,412ಕ್ಕೆ ಏರಿಕೆಯಾಗಿದೆ. ಇವರಲ್ಲಿ 503 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ರಾಷ್ಟ್ರದಲ್ಲಿ ಲಾಕ್​ಡೌನ್​ ಅವಧಿ ಏ.14ಕ್ಕೆ ಅಂತ್ಯಗೊಳ್ಳಲಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದವರೆಗೂ ಲಾಕ್​ಡೌನ್​ ಮುಂದುವರೆಸಬಹುದು. (ಏಜೆನ್ಸೀಸ್​)
ಜಮೀನಿಗೆ ಹೋಗುತ್ತಿದ್ದ ರೈತನ ಮೇಲೆರಗಿದವು ಕರಡಿಗಳು: ಇಂದು ಬೆಳ್ಳಂಬೆಳಗ್ಗೆ ನಡೆದ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 9 =
Remember me
