ನವದೆಹಲಿ:ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕರೊನಾ ವೈರಸ್​ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾ.31ರವರೆಗೆ ಸರ್ಕಾರಿ ಕಚೇರಿಗಳನ್ನು ಮುಚ್ಚುವ ನಿರ್ಧಾರವನ್ನು ದೆಹಲಿ ಸರ್ಕಾರ ಮಾಡುತ್ತಿದೆ ಎಂದು ತಿಳಿದು ಬಂದಿದೆ.
ಸರ್ಕಾರಿ ಕಚೇರಿಗಳನ್ನು ಮುಚ್ಚುವ ವಿಚಾರವಾಗಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್​ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ದೆಹಲಿಯಲ್ಲಿ 13 ಮಂದಿಗೆ ಕರೊನಾ ವೈರಸ್​ ಸೋಂಕು ತಗುಲಿದೆ. 2ನೇ ಹಂತದಲ್ಲಿರುವ ಸೋಂಕು ಹರಡುವಿಕೆ 3ನೇ ಹಾಗೂ 4ನೇ ಹಂತಕ್ಕೆ ತಲುಪದಂತೆ ಮಾಡಲು ಸರ್ಕಾರಿ ಕಚೇರಿಗಳನ್ನು ಮುಚ್ಚುವುದು ಅಗತ್ಯ ಎಂದು ಸರ್ಕಾರ ನಿರ್ಧರಿಸಿದೆ.
ಮಾರ್ಚ್​ 31ರವರೆಗೆ ಅಗತ್ಯ ಸೇವೆ ಒದಗಿಸುವ ಆರೋಗ್ಯ, ಆಹಾರ ಮತ್ತು ನಾಗರಿಕಾ ಪೂರೈಕೆ ಇಲಾಖೆ, ಜಲಮಂಡಳಿ, ವಿದ್ಯುತ್​, ಅಗ್ನಿಶಾಮಕ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳನ್ನು ಮುಚ್ಚುವ ಪ್ರಸ್ತಾವನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರಿ ಕಚೇರಿಗಳನ್ನು ತಾತ್ಕಾಲಿಕವಾಗಿ ಬಂದ್​ ಮಾಡುವ ನಿರ್ಧಾರದ ಬಗ್ಗೆ ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಅವರ ಆದೇಶವನ್ನು ಕಾಯಲಾಗುತ್ತಿದೆ. ಅವರು ಆದೇಶ ನೀಡಿದ ಕೂಡಲೇ ಕಚೇರಿಗಳನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)
ಕರೊನಾ ಕಾಲಿಟ್ಟ ಬೆನ್ನಲ್ಲೇ ಕೊಡಗು ಜಿಲ್ಲಾದ್ಯಂತ ಸೆಕ್ಷನ್​ 144 ಜಾರಿ; ಹೋಟೆಲ್​, ರೆಸಾರ್ಟ್​ಗಳೆಲ್ಲ ಮಾ.31ರವರೆಗೆ ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 1 =
Remember me
