ನವದೆಹಲಿ:ಮುಂಬರುವ ದಿನಗಳಲ್ಲಿ ಚಳಿಗಾಲ ಆರಂಭವಾಗಲಿದ್ದು, ಸಾಲು ಸಾಲು ಹಬ್ಬಗಳು ಬರುತ್ತಿವೆ. ಹೀಗಾಗಿ ಮಹಾಮಾರಿ ಕರೊನಾ ಕುರಿತು ಭಾರಿ ಎಚ್ಚರಿಕೆ ವಹಿಸಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್​ಸಿಡಿಸಿ) ಎಚ್ಚರಿಸಿದೆ.
ಚಳಿಗಾಲದಲ್ಲಿ ಕರೊನಾ ಪ್ರಮಾಣ ಹೆಚ್ಚಾಗಲಿದೆ ಎಂದಿರುವ ಎನ್​ಸಿಡಿಸಿ, ದೆಹಲಿಯಲ್ಲೇ ದಿನವೊಂದಕ್ಕೆ 15 ಸಾವಿರ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದಿದೆ. ಹೀಗಾಗಿ ಚಳಿಗಾಲವನ್ನು ಗಂಭೀರವಾಗಿ ಪರಿಗಣಿಸಿ ದೆಹಲಿ ಸರ್ಕಾರ ಮೊದಲೇ ಸಿದ್ಧವಾಗುವುದು ಒಳಿತು ಎಂದು ಎನ್​ಸಿಡಿಸಿ ಸಲಹೆ ನೀಡಿದೆ.
ಇದನ್ನೂ ಓದಿ:ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಪದೇಪದೆ ಈ ಗುಲಾಬಿಯೇ ಅಧ್ಯಕ್ಷೆ!
ದೆಹಲಿಯಲ್ಲಿ ಕರೊನಾದಿಂದ ಮೃತಪಟ್ಟವರ ಪ್ರಮಾಣ 1.9 ರಷ್ಟಿದ್ದು, ಶೇ. 1.5 ಹೊಂದಿರುವ ರಾಷ್ಟ್ರೀಯ ಸರಾಸರಿಗಿಂತಲೂ ಹೆಚ್ಚಿದೆ. ಹೀಗಾಗಿ ಸಾಧ್ಯವಾದಷ್ಟು ಮರಣ ಪ್ರಮಾಣವನ್ನು ಕಡಿಮೆ ಮಾಡುವುದು ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವ ಮುಖ್ಯ ಉದ್ದೇಶಗಳಲ್ಲಿ ಒಂದಾಗಿರಬೇಕೆಂದು ಹೇಳಿದೆ.
ಕಳೆದ ಮಂಗಳವಾರ ಮಾತನಾಡಿದ್ದ ಸಿಎಂ ಅರವಿಂದ್​ ಕೇಜ್ರಿವಾಲ್​, ಎರಡನೇ ಹಂತದ ಕರೊನಾ ವೈರಸ್​ ರಾಷ್ಟ್ರ ರಾಜಧಾನಿಯಲ್ಲಿ ಕ್ಲೈಮ್ಯಾಕ್ಸ್​ ಹಂತ ತಲುಪಿದೆ. ಪರಿಸ್ಥಿತಿಯನ್ನು ಬಹಳ ನಿಯಂತ್ರಿಸಲಾಗಿದೆ. ಸೋಂಕನ್ನು ಪತ್ತೆಹಚ್ಚಲು ಪರೀಕ್ಷೆಗಳನ್ನು ಹೆಚ್ಚು ಮಾಡಲಾಗುವುದು ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಚಿತ್ರದಲ್ಲಿ ಅಡಗಿರೋ ಸುಂದರಿಯ ಗುರುತಿಸುವಿರಾ?ಫೋಟೋ ಕ್ಲಿಕ್​ ಮಾಡಿ… ಝೂಮ್​ ಮಾಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
