ಬೀದರ್​:ಕರೊನಾ ವೈರಸ್ ಸೋಂಕಿತನಾಗಿದ್ದ ತೆಲಂಗಾಣದ ಟೆಕ್ಕಿಯ ಎರಡನೇ ಬಾರಿಯ ತಪಾಸಣೆ ವರದಿ ನೆಗೆಟಿವ್​ ಎಂದು ಬಂದಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಇಟೆಲಾ ರಾಜೇಂದ್ರ ತಿಳಿಸಿದ್ದಾರೆ.
ದುಬೈನಿಂದ ಆಗಮಿಸಿದ್ದ ತೆಲಂಗಾಣ ಟೆಕ್ಕಿಯಲ್ಲಿ ಸೋಂಕು ದೃಢಪಟ್ಟಿತ್ತು. ಅವರನ್ನು ಪ್ರತ್ಯೇಕ ವಾರ್ಡ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗಿತ್ತು. ಈಗ ಎರಡನೇ ಬಾರಿ ಪರಿಶೀಲನೆ ನಡೆಸಿದಾಗ ವೈದ್ಯಕೀಯ ವರದಿಯಲ್ಲಿ ಸೋಂಕು ನಾಶವಾಗಿರುವುದು ಬೆಳಕಿಗೆ ಬಂದಿದೆ.
ಟೆಕ್ಕಿಯಲ್ಲಿ ಕರೊನಾ ವೈರಸ್​ ಕಾಣಿಸಿಕೊಳ್ಳುತ್ತಿದ್ದಂತೆ ಇಡೀ ತೆಲಂಗಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಈಗ ಜನರು ನಿರಾಳವಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬೇರೆ ದೇಶಗಳಿಂದ ಬಂದವರು ದಯವಿಟ್ಟು ನಿಮ್ಮ ನಿಮ್ಮ ಮನೆಗಳಲ್ಲೇ 14 ದಿನಗಳವರೆಗೆ ಇರಿ. ಹೊರಗಡೆ ಬರಬೇಡಿ ಎಂದು ಇಟೆಲಾ ರಾಜೇಂದ್ರ ಅವರು ಮನವಿ ಮಾಡಿದ್ದಾರೆ.
ಅದರಲ್ಲೂ ಚೀನಾ, ಹಾಂಗ್ ಕಾಂಗ್, ದಕ್ಷಿಣ ಕೊರಿಯಾ, ಜಪಾನ್, ಇಟಲಿ, ಥೈಲ್ಯಾಂಡ್, ಸಿಂಗಾಪುರ್, ಮಲೇಷಿಯಾ, ಫ್ರಾನ್ಸ್, ಸ್ಪೇನ್, ಜರ್ಮನಿಗಳಿಂದ ಬರುವವರು ತುಂಬ ಮುನ್ನೆಚ್ಚರಿಕೆ ವಹಿಸಬೇಕು ಎಂದಿದ್ದಾರೆ. (ದಿಗ್ವಿಜಯ ನ್ಯೂಸ್​)

ಸರ್ಕಾರದ ಆದೇಶ ಪಾಲಿಸದೆ ಮೊಂಡಾಟ ಮಾಡುವ ಶಾಲೆಗಳ ವಿರುದ್ಧ ಕ್ರಮದ ಎಚ್ಚರಿಕೆ: ಮಕ್ಕಳ ಹಿತಕ್ಕಿಂತ ಶಾಲೆಯ ಪ್ರತಿಷ್ಠೆ ಮುಖ್ಯವೇ?- ಶಿಕ್ಷಣ ಸಚಿವರ ಪ್ರಶ್ನೆ

ವಿಶ್ವಕ್ಕೆ ಅಂಟಿದ ಆತಂಕ ಕೊರೊನಾ; ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಸಚಿವರಿಗೂ ತಗುಲಿದೆ ಸೋಂಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
