ನವದೆಹಲಿ:ಕೋವಿಡ್​ನಿಂದ ಮುಕ್ತವಾಗುವವರೆಗೆ ಚುನಾವಣೆಗಳನ್ನು ಮುಂದೂಡಿ ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೇ ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಚುನಾವಣೆ ಮುಂದೂಡಲು ಕೋವಿಡ್​ಅನ್ನು ಕಾರಣವಾಗಿ ಪರಿಗಣಿಸಲಾಗದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್​ ಹೇಳಿದೆ.
ಕೇಂದ್ರ ಚುನಾವಣಾ ಆಯೋಗ ಎಲ್ಲ ವಿಚಾರಗಳನ್ನು ಪರಿಗಣಿಸಿರುತ್ತದೆ ಎಂದು ಹೇಳಿದ ನ್ಯಾಯಮೂರ್ತಿ ಅಶೋಕ್​ ಭೂಷಣ್​ ನೇತೃತ್ವದ ಪೀಠ, ಬಿಹಾರ ವಿಧಾನಸಭಾ ಚುನಾವಣೆ ಮುಂದೂಡಿಕೆ ಕೋರಿದ್ದ ಅರ್ಜಿ ವಜಾಗೊಳಿಸಿತು.
ಇದನ್ನೂ ಓದಿ;ಶವ ಹೂಳೋಕೆ ಜಾಗವಿರಲಿಲ್ಲ; ಶವಾಗಾರಗಳೂ ಸಾಲಲಿಲ್ಲ; ಆದರೂ, ಲಾಕ್​ಡೌನ್​ ಇಲ್ಲದೇ ಕರೊನಾಗೆ ತಡೆ..!
ಪ್ರಜಾಪ್ರತಿನಿಧಿತ್ವ ಕಾಯ್ದೆ ಅನ್ವಯ ಕೋವಿಡ್​ ಸಂಕಷ್ಟವನ್ನು ವಿಶೇಷ ಸಂದರ್ಭವೆಂದು ಪರಿಗಣಿಸಿ ಚುನಾವಣೆಯನ್ನು ಮುಂದೂಡುವಂತೆ ಮುಖ್ಯ ಚುನಾವಣಾ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಅವಿನಾಶ್​ ಠಾಕೂರ್​ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.
ಚುನಾವಣಾ ಆಯೋಗ ಎಲ್ಲವನ್ನೂ ಪರಿಗಣಿಸಿರುತ್ತದೆ. ಹೀಗಾಗಿ ಚುನಾವಣೆ ಮುಂದೂಡುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಅರ್ಜಿಯನ್ನು ವಜಾಗೊಳಿಸಿತು.ಚುನಾವಣಾ ಆಯೋಗ ಈಗಾಗಲೇ ಬಿಹಾರ ಚುನಾವಣೆ ಹಿನ್ನೆಲೆ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ.
https://www.vijayavani.net/ec-issues-guidelines-for-conduct-of-elections-during-covid-19/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
