ನವದೆಹಲಿ:ರಾಷ್ಟ್ರರಾಜಧಾನಿಯಲ್ಲಿ ಕರೊನಾ ಸೋಂಕಿನ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ ಅಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿದಾಟಿದೆ.
ಇಂದು ಒಂದೇ ದಿನ 1379 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,00,823ಕ್ಕೆ ಏರಿದೆ. ಮೃತರ ಒಟ್ಟು ಸಂಖ್ಯೆ 3115 ಆಗಿದೆ.
ದೆಹಲಿಯಲ್ಲಿ ಕರೊನಾ ಟೆಸ್ಟ್​, ಚಿಕಿತ್ಸೆಗಾಗಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ ಪ್ಲಾಸ್ಮಾ ಬ್ಯಾಂಕ್​ಗಳನ್ನು ತೆರೆಯಲಾಗಿದ್ದು, ಕರೊನಾದಿಂದ ಚೇತರಿಸಿಕೊಂಡವರು ಪ್ಲಾಸ್ಮಾ ದಾನ ಮಾಡಿ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಮನವಿ ಮಾಡಿದ್ದಾರೆ.
ಹಾಗೇ ಮನೆಮನೆಗೆ ತೆರಳಿ ಕೊವಿಡ್​-19 ಸಮೀಕ್ಷೆ ನಡೆಸಲಾಗುತ್ತಿದೆ. ಹೆಲ್ಪ್​ಲೈನ್​ಗಳನ್ನು ತೆರೆಯಲಾಗಿದೆ. ದೆಹಲಿಯಲ್ಲಿ ಕರೊನಾದಿಂದ ಗುಣಮುಖರಾಗುತ್ತಿರುವವರ ಪ್ರಮಾಣವೂ ಶೇ.70ಕ್ಕೆ ಏರಿದ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.(ಏಜೆನ್ಸೀಸ್​)
ಮೈಸೂರಿನಲ್ಲಿ ಬಂಧಿತನಾದ ಅತ್ಯಾಚಾರ ಆರೋಪಿಗೆ ಕರೊನಾ; ಛತ್ತೀಸ್​ಗಢದ 60 ಪೊಲೀಸರಿಗೆ ಕ್ವಾರಂಟೈನ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 4 =
Remember me
