ನವದೆಹಲಿ:ಒಂದೆಡೆ ಲಾಕ್​ಡೌನ್​ ಸಡಿಲಿಕೆ, ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುತ್ತಿರುವುದು, ಸಾಮಾನ್ಯ ಜನರ ಸಹಜ ಓಡಾಟ….ಇನ್ನೊಂದೆಡೆ ಸತತವಾಗಿ ಏರಿಕೆಯಾಗುತ್ತಲೇ ಇರುವ ಕರೊನಾ ಸೋಂಕಿನ ಪ್ರಸರಣ.
ದೇಶದಲ್ಲಿ ಕಳೆದ 24ಗಂಟೆಯಲ್ಲಿ ಬರೋಬ್ಬರಿ 4000 ಕರೊನಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಈವರೆಗಿನ ಅತಿ ಹೆಚ್ಚು ಸಂಖ್ಯೆ ಇದು.
ಇದನ್ನೂ ಓದಿ:ದೆಹಲಿ ಹುಡುಗರ ಅಶ್ಲೀಲ ಚಾಟ್​ ಪ್ರಕರಣಕ್ಕೆ ಟ್ವಿಸ್ಟ್​; ಶಾಕಿಂಗ್​ ಸತ್ಯ ಬಿಚ್ಚಿಟ್ಟ ಪೊಲೀಸರು
ಸದ್ಯ ಸೋಂಕಿತರ ಸಂಖ್ಯೆ 67,152ಕ್ಕೆ ಏರಿದ್ದು, ಅದರಲ್ಲಿ ಸಕ್ರಿಯ ಪ್ರಕರಣಗಳು 44,029. ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು 20,916. ಹಾಗೇ ಸಾವಿನ ಸಂಖ್ಯೆ 2,206ಕ್ಕೆ ಏರಿದೆ ಎಂದು ಇಂದು ಬೆಳಗ್ಗೆ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಲ್ಲಿ ಮೂರನೇ ಹಂತದ ಲಾಕ್​ಡೌನ್ ಜಾರಿಯಲ್ಲಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಸಡಿಲಿಕೆ ಆಗಿದ್ದರಿಂದ ಜನರ ಸಂಚಾರವೂ ಸಹಜ ಸ್ಥಿತಿಗೆ ಬರುತ್ತಿದೆ.
ಇದನ್ನೂ ಓದಿ:ತಾಯಂದಿರ ದಿನವೇ ನಡೆಯಿತು ತಂದೆ-ತಾಯಿಯ ಭೀಕರ ಹತ್ಯೆ: ಮಗನೇಕೆ ಇಂಥ ನೀಚ ಕೆಲಸಕ್ಕೆ ಮುಂದಾದ?
ಮೇ 17ರವರೆಗೆ ಲಾಕ್​ಡೌನ್​ ಇದ್ದು, ಅದಾದ ಬಳಿಕ ಮುಂದೇನು ಎಂಬ ಪ್ರಶ್ನೆ ಎದ್ದಿದ್ದು, ಇಂದು ಮಧ್ಯಾಹ್ನ 3ಗಂಟೆಗೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸುವ ವಿಡಿಯೋ ಕಾನ್ಫರೆನ್ಸ್​​ ಬಗ್ಗೆ ಇಡೀ ದೇಶ ಕುತೂಹಲದಿಂದ ಇದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − one =
Remember me
