ನವದೆಹಲಿ:ಕರೊನಾ ವೈರಸ್​ ಸೋಂಕು ಹರಡದಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಅನೇಕ ಜಿಲ್ಲೆಗಳನ್ನು ಲಾಕ್​ಡೌನ್​ ಮಾಡಿದೆ. ಹೀಗಿದ್ದರೂ ಜನರ ಓಡಾಟ ಎಂದಿನಂತೆ ಇರುವ ಕಾರಣ ಲಾಕ್​ಡೌನ್​ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಖಡಕ್​ ಸಂದೇಶ ರವಾಸಿದೆ.
ಇಷ್ಟೇಅಲ್ಲದೆ ಲಾಕ್​ಡೌನ್​ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸೋಮವಾರ ಅಧಿಕೃತ ಹೇಳಿಕೆಯನ್ನು ಹೊರಡಿಸಿದೆ.
ಭಾನುವಾರವಷ್ಟೇ ದೇಶಾದ್ಯಂತ ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಜನತಾ ಕರ್ಪ್ಯೂ ಪಾಲಿಸಲಾಯಿತು. ಅಲ್ಲದೆ, ಸೋಂಕಿತರ ಪ್ರಕರಣ ಏರಿಕೆಯಾದ ಹಿನ್ನೆಲೆಯಲ್ಲಿ ಮಾರ್ಚ್​ 31ರವರೆಗೆ ದೇಶದ 80 ಜಿಲ್ಲೆಗಳನ್ನು ಲಾಕ್​ಡೌನ್​ ಮಾಡುವ ನಿರ್ಧಾರಕ್ಕೆ ಬಂದಿದೆ.
ಲಾಕ್​ಡೌನ್​ನಿಂದ ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಹಲವು ರಾಜ್ಯಗಳಲ್ಲಿ 144 ಸೆಕ್ಷನ್​ ಕೂಡ ಜಾರಿ ಮಾಡಲಾಗಿದ್ದು, ನಾಲ್ಕ ಮಂದಿಗಿಂತ ಹೆಚ್ಚಿನ ಜನರು ಒಟ್ಟಿಗೆ ಸೇರುವಂತಿಲ್ಲ. ಯಾರು ಈ ನಿಯಮಗಳನ್ನು ಉಲ್ಲಂಘಿಸುತ್ತಾರೋ ಅವರಿಗೆ ಸೆಕ್ಷನ್​ 188ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಮಾನವ ಸುರಕ್ಷಿತ ಜೀವನಕ್ಕೆ ಭಂಗ ತಂದರೆ, ಒಂದು ತಿಂಗಳ ಸಜೆ ಮತ್ತು 200 ರೂ. ದಂಡ ಅಥವಾ 6 ತಿಂಗಳು ಜೈಲು ಹಾಗೂ 1,000 ದಂಡ ವಿಧಿಸಲಾಗುತ್ತದೆ.
ಇಂದು ಬೆಳಗ್ಗೆಯಷ್ಟೇ ಪ್ರಧಾನಿ ಮೋದಿ ಅವರು ಟ್ವೀಟ್​ ಮಾಡಿ ದೇಶದ ಜನತೆ ಮೇಲೆ ಅಸಮಾಧಾನ ಹೊರಹಾಕಿದ್ದರು. ಲಾಕ್​ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಇದಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಗಂಭೀರವಾಗಿ ಪಾಲಿಸಿ. ಕಾನೂನು ಮತ್ತು ನಿಯಮಗಳನ್ನು ಪಾಲಿಸುವುದನ್ನು ಜನತೆಗೆ ರಾಜ್ಯ ಸರ್ಕಾರಗಳು ಖಚಿತಪಡಿಸಿ ಎಂದು ಪ್ರಧಾನಿ ವಿನಂತಿ ಮಾಡಿದ್ದರು.
ದೇಶದಲ್ಲಿ ಈವರೆಗೆ 400ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 8 ಮಂದಿ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ದೇಶದ ಜನತೆ ಮೇಲೆ ಪ್ರಧಾನಿ ಮೋದಿ ಅಸಮಾಧಾನ: ದಯವಿಟ್ಟು ಗಂಭೀರವಾಗಿ ಪರಿಗಣಿಸಿ ಎಂದು ಮನವಿ

VIDEO| ಹಿಂದು-ಮುಸ್ಲಿಂ ಅಲ್ಲ, ಮಾನವನಾಗಲು ಇದು ಸಕಾಲ: ಶೋಯೆಬ್​ ಅಖ್ತರ್​ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
