ನವದೆಹಲಿ:ದೇಶವ್ಯಾಪಿ ತಲೆನೋವಾಗಿ ಪರಿಣಮಿಸಿರುವ ಕರೊನಾ ವೈರಸ್‌ ನಿಯಂತ್ರಣಕ್ಕೆ ಏನೇನು ಮಾಡಬಹುದು ಹಾಗೂ ಈಗಾಗಲೇ ಏನೇನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳು ಸೇರಿದಂತೆ ವಿವಿಧ ರಾಜಕೀಯ ಧುರೀಣರ ಜತೆ ಇಂದು ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಕರೊನಾ ಸೋಂಕು ಹರಡುವಿಕೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಮುಖಂಡರು ಪರ- ವಿರೋಧ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈ ಮಾತುಕತೆ ನಡೆದಿರುವುದು ಬಹಳ ಮಹತ್ವ ಪಡೆದಿದೆ.
ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್‌, ಪ್ರಣವ್‌ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್‌.ಡಿ.ದೇವೇಗೌಡ ವಿವಿಧ ಪಕ್ಷಗಳ ಮುಖಂಡರಾದ ಸೋನಿಯಾ ಗಾಂಧಿ, ಮುಲಾಯಮ್‌ ಸಿಂಗ್‌ , ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ, ನವೀನ್‌ ಪಟ್ನಾಯಕ್‌, ಕೆಸಿಆರ್‌, ಸ್ಟ್ಯಾಲೀನ್‌, ಪ್ರಕಾಶ್‌ ಸಿಂಗ್‌ ಬಾದಲ್‌ ಸೇರಿದಂತೆ ಹಲವು ಮುಖಂಡರ ಜತೆ ಮಾತುಕತೆ ನಡೆಸಿದರು.
ಈಗಾಗಲೇ ಮೋದಿಯವರು ವಿವಿಧ ಕ್ರೀಡಾ ತಾರೆಯರು, ದೇಶದ ವಿವಿಧ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಕರೊನಾ ನಿಯಂತ್ರಣಕ್ಕೆ ಸಾರ್ವಜನಿಕರು ಹೇಗೆ ಸಹಕರಿಸಬೇಕು ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡುವಂತೆ ಕ್ರೀಡಾಪಟುಗಳಿಗೆ ಈಗಾಗಲೇ ಸೂಚಿಸಿರುವ ಪ್ರಧಾನಿ, ಆಯಾ ರಾಜ್ಯಗಳಲ್ಲಿ ಹೇಗೆ ನಿಯಂತ್ರಣದ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ, ಜತೆಗೆ, ಆಯಾ ರಾಜ್ಯಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೂ ಮಾಹಿತಿ ಸಂಗ್ರಹಿಸಿದ್ದಾರೆ.(ಏಜೆನ್ಸೀಸ್​​)
ವಿದೇಶದಲ್ಲಿ ವ್ಯಾಸಂಗದ ಕನಸಿಗೆ ತಣ್ಣಿರೆರಚಿದ ಕರೊನಾ: ಪರೀಕ್ಷೆ ವಿಳಂಬ, ಪ್ರವೇಶ ಮರೀಚಿಕೆ

ಕಾಶ್ಮೀರ ಕಣಿವೆಗೆ ನುಸುಳಲು ಯತ್ನಿಸಿದ 9 ಉಗ್ರರ ಹತ್ಯೆ, ಭದ್ರತಾ ಪಡೆಯ ಮೂವರು ಸಿಬ್ಬಂದಿ ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
