ನವದೆಹಲಿ:ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮಾರ್ಚ್​ 31ರವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಮಾರಕ ವೈರಸ್​ ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಟ್ವೀಟ್​ ಮಾಡಿದ್ದಾರೆ.
ಈ ಮೊದಲು ದೆಹಲಿ ಸರ್ಕಾರವು ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಗೆ ಬಯೋಮೆಟ್ರಿಕ್​ ಹಾಜರಾತಿಯನ್ನು ರದ್ದುಗೊಳಿಸುವಂತೆ ಸಲಹೆ ನೀಡಿತ್ತು.
ಈ ಬಗ್ಗೆ ಸಂಸ್ಥೆಗಳು ಅಧಿಕಾರಿಗಳಿಗೆ, ಕಾರ್ಯದರ್ಶಿಗಳಿಗೆ ಹಾಗೂ ಪಾಲಿಕೆಗೆ ಪತ್ರ ಬರೆದು ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್​ ಹಾಜರಾತಿಯನ್ನು ಸದ್ಯದ ಮಟ್ಟಿಗೆ ರದ್ದುಗೊಳಿಸಬೇಕೆಂದು ತಿಳಿಸಲಾಗಿತ್ತು.
ದೆಹಲಿಯ ಮಯೂರ ವಿಹಾರ ಎಂಬ ಪ್ರದೇಶದ ವ್ಯಕ್ತಿಯೊಬ್ಬನಿಗೆ ಮೊದಲ ಬಾರಿ ಕೊರೊನಾ ವೈರಸ್​ ಕಾಣಿಸಿಕೊಂಡಿತ್ತು. ಇದು ಆಗ್ರಾದಲ್ಲಿರುವ ಆತನ ಕುಟುಂಬದ 5 ಮಂದಿಗೂ ಸೋಂಕು ತಗುಲಲು ಕಾರಣವಾಗಿತ್ತು. ಸೋಂಕು ತಗುಲಿದ ವ್ಯಕ್ತಿಯ ಜತೆ ವ್ಯವಹಾರವಿರಿಸಿಕೊಂಡಿದ್ದ 88 ಮಂದಿಗೂ ತಪಾಸಣೆ ನಡೆಸಲಾಗಿದ್ದು, ಅವರ ಮೇಲೆ ನಿಗಾ ವಹಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.(ಏಜೆನ್ಸೀಸ್​)
As a precautionary measure to prevent the possibility of spread of COVID-19 amongst our children, Delhi Government has directed immediate closure of all primary schools (Govt/ aided/ private/MCD/NDMC) till 31/3/20
— Manish Sisodia (@msisodia)March 5, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
