ನವದೆಹಲಿ: ರಾಷ್ಟ್ರದಲ್ಲಿ ಕೊರೊನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟಕ್ಕೆ ವೈರಸ್​ ಪತ್ತೆ ಹಾಗೂ ಚಿಕಿತ್ಸೆ ಸೌಲಭ್ಯ ವಿಸ್ತರಿಸುವಂತೆ ಪ್ರಧಾನ ಮಂತ್ರಿಗಳ ಕಚೇರಿ ಆರೋಗ್ಯ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಜಿಲ್ಲಾ ಮಟ್ಟಗಳಲ್ಲಿ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಕೇಂದ್ರ, ಪತ್ತೆಯಾದ ಸೋಂಕಿತರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್​, ಸೋಂಕು ಹರಡದಂತೆ ತಡೆಯುವ ಕ್ರಮ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಇಟಲಿ ಮೂಲಕ ವ್ಯಕ್ತಿಯಿಂದ ರಾಷ್ಟ್ರದಲ್ಲಿ 28 ಮಂದಿಗೆ ವೈರಸ್​ ಹರಡಿದೆ. ಅವರು ರಾಜಸ್ತಾನಕ್ಕೆ ಭೇಟಿ ನೀಡಿದ್ದರು. ಅವರ ಸಂಪರ್ಕಕ್ಕೆ ಅಂದಾಜು 200 ಮಂದಿ ಬಂದಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಸೌಲಭ್ಯ ವಿಸ್ತರಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಸರ್ಕಾರಿ ಇಲಾಖೆಗಳು ಯಾವುದೇ ಸಮಾವೇಶ ಹಾಗೂ ಸಭೆಗಳನ್ನು ನಡೆಸಬೇಕಾದರೆ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ಸಲಹೆ ಪಡೆಯಬೇಕು ಎಂದು ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಿಶ್ರಾ ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
