ನವದೆಹಲಿ:ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗಿರುವ ಕರೊನಾ ವೈರಸ್​ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರ ನಿದ್ದೆ ಗೆಡಿಸಿದೆ. 18,549 ಸೋಂಕಿತರು, ಒಂದೂ ಗುಣಮುಖವಾಗದ ಕೇಸ್​, 416 ಮಂದಿಯ ಸಾವು… ಇದು ಮುಖ್ಯಮಂತ್ರಿಯನ್ನು ಕಂಗೆಡಿಸಿದೆ.
ದೆಹಲಿಗೆ ಹೊರ ರಾಜ್ಯಗಳಿಂದ ಬರುವವರ ಸಂಖ್ಯೆ ಹೆಚ್ಚಿರುವ ಕಾರಣ, ಅದರಲ್ಲಿಯೂ ಈಗ ಲಾಕ್​ಡೌನ್​ ಸಡಿಲಿಕೆ ಆಗಿರುವ ಹಿನ್ನೆಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಆತಂಕದ ಹಿನ್ನೆಲೆಯಲ್ಲಿ ಸದ್ಯ ಗಡಿಯನ್ನು ಮುಚ್ಚಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಕರೊನಾ ಬಿಕ್ಕಟ್ಟು ನಿವಾರಣೆ: ಕರ್ನಾಟಕಕ್ಕೆ ಪ್ರಧಾನಿ ಮೋದಿ ಶಹಭಾಸ್​ಗಿರಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್​, ಸದ್ಯ ಒಂದು ವಾರದ ಮಟ್ಟಿಗೆ ದೆಹಲಿಯ ಗಡಿಯನ್ನು ಮುಚ್ಚಲಾಗುವುದು. ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ. ಅದನ್ನು ಹೊರತುಪಡಿಸಿದರೆ ಮತ್ತೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ಗಡಿ ಬಂದ್​ ಒಂದು ವಾರ ಇರುತ್ತದೆ. ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ನಾಗರಿಕರ ಹಾಗೂ ತಜ್ಞರ ಸಲಹೆಯ ಮೆರೆಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದರು.
ಇದನ್ನೂ ಓದಿ:ಕಾನೂನು ಸಲಹೆ: ಹೆಂಡತಿ ಸಂಸಾರಕ್ಕೆ ಒಪ್ಪದಿದ್ದರೆ ನಾನು ಬೇರೆ ಮದುವೆಯಾಗಬಹುದೆ?
ಲಾಕ್​ಡೌನ್​ ಸಡಿಲಿಕೆ ಅಗಿರುವ ಹಿನ್ನೆಲೆಯಲ್ಲಿ, ಇಲ್ಲಿಯವರೆಗೆ ಮುಚ್ಚಲಾಗಿದ್ದ ಅಂಗಡಿಗಳನ್ನು ತೆರೆಯಲು ಅವರು ಅವಕಾಶ ಕಲ್ಪಿಸಿದ್ದಾರೆ. ಹಿಂದಿನ ಆದೇಶದಂತೆ ಆಟೋ ರಿಕ್ಷಾ ಹಾಗೂ ಇ- ರಿಕ್ಷಾಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಈಗ ಇವೂ ಸೇರಿದಂತೆ ಇತರ ವಾಹನಗಳಲ್ಲಿ ಪ್ರಯಾಣಿಸುವವರ ಮೇಲಿನ ನಿರ್ಬಂಧವನ್ನು ತೆಗೆದು ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ. ಕ್ಷೌರಿಕ ಅಂಗಡಿ ಹಾಗೂ ಸಲೂನ್‌ಗಳನ್ನು ತೆರೆಯಲೂ ಅವರು ಅವಕಾಶ ಕಲ್ಪಿಸಿದ್ದಾರೆ.
#WATCHDelhi borders to be sealed for the next one week. Essential services are exempted. We will take a decision again in one week to open borders after suggestions from citizens: Delhi CM Arvind Kejriwal.#COVID19pic.twitter.com/kHDU4W6Qd4
— ANI (@ANI)June 1, 2020

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
