ನವದೆಹಲಿ: ರಾಷ್ಟ್ರದಲ್ಲಿ ಶುಕ್ರವಾರ ಬೆಳಗ್ಗೆ ವೇಳೆಗೆ 13,387 ಮಂದಿಯಲ್ಲಿ ಕರೊನಾ ವೈರಸ್​ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
13,387 ಮಂದಿಯಲ್ಲಿ 11.201 ಕೇಸುಗಳು ಸಕ್ರಿಯವಾಗಿವೆ. 1,748 ಮಂದಿ ಚೇತರಿಸಿಕೊಂಡಿದ್ದಾರೆ. 437 ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ, ದೆಹಲಿ ಹಾಗೂ ತಮಿಳುನಾಡಿನಲ್ಲಿ ಕರೊನಾ ವೈರಸ್​ನ ಅಟ್ಟಹಾಸ ಮುಂದುವರೆದಿದೆ. ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ರಾಜ್ಯಗಳಲ್ಲೂ ಕೂಡ ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿದೆ ಎಂದು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಅಧಿಕ ಮಂದಿ ಸಾವು: ಮಹಾರಾಷ್ಟ್ರದಲ್ಲಿ 3205 ಕೇಸುಗಳು ಸಕ್ರಿಯವಾಗಿವೆ. 194 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 300 ಮಂದಿ ರೋಗಿಗಳಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
2ನೇ ಸ್ಥಾನದಲ್ಲಿ ದೆಹಲಿ: ಕರೊನಾ ವೈರಸ್​ ಸೋಂಕಿತರ ಪಟ್ಟಿಯಲ್ಲಿ ದೆಹಲಿ 2ನೇ ಸ್ಥಾನದಲ್ಲಿದೆ. 1640 ಮಂದಿ ಸೋಂಕಿತರು ಇದ್ದು, 38 ಮಂದಿ ಮೃತಪಟ್ಟಿದ್ದಾರೆ. 51 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ತಮಿಳುನಾಡು ರಾಜ್ಯ 3ನೇ ಸ್ಥಾನದಲ್ಲಿದ್ದು 1267 ಮಂದಿ ಸೋಂಕಿತರು ಇದ್ದು, 180 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 15 ಮಂದಿ ಮೃತಪಟ್ಟಿದ್ದಾರೆ.
ರಾಜಸ್ಥಾನದಲ್ಲಿ 1131 ಮಂದಿ ಸೋಂಕಿತರು ಇದ್ದಾರೆ. ಮಧ್ಯ ಪ್ರದೇಶದಲ್ಲಿ 1120 ಮಂದಿ ಸೋಂಕಿತರು ಇದ್ದು, 53 ಮಂದಿ ಮೃತಪಟ್ಟಿದ್ದಾರೆ. 64 ಮಂದಿ ಚೇತರಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ 805 ಮಂದಿಗೆ ಸೋಂಕು ತಗುಲಿದೆ. ಇವರಲ್ಲಿ 74 ಮಂದಿ ಚೇತರಿಸಿಕೊಂಡಿದ್ದರೇ 13 ಮಂದಿ ನಿಧನರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತವರು ರಾಜ್ಯ ಗುಜರಾತ್​ನಲ್ಲಿ 930 ಮಂದಿಗೆ ಸೋಂಕು ಹರಡಿದೆ. 73 ಮಂದಿ ಗುಣಮುಖರಾಗಿದ್ದು, 36 ರೋಗಿಗಳು ಸಾವನ್ನಪ್ಪಿದ್ದಾರೆ.
ತೆಲಂಗಾಣದಲ್ಲಿ 700 ಮಂದಿಗೆ ಸೋಂಕು ತಗುಲಿದ್ದು, 186 ಮಂದಿ ಗುಣಮುಖರಾಗಿದ್ದಾರೆ. 18 ಮಂದಿ ಮೃತಪಟ್ಟಿದ್ದಾರೆ.
ಆಂಧ್ರ ಪ್ರದೇಶದಲ್ಲಿ 534 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದ್ದು, 20 ಮಂದಿ ಚೇತರಸಿಕೊಂಡಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ 395 ಮಂದಿ ಸೋಂಕಿತರು ಇದ್ದು ಕೇವಲ ಮೂರು ಮಂದಿ ಮೃತಪಟ್ಟು 245 ಮಂದಿ ಗುಣಮುಖರಾಗಿದ್ದಾರೆ.
ಕರ್ನಾಟಕದಲ್ಲಿ 315 ಮಂದಿಗೆ ಸೋಂಕು ಹರಡಿದೆ. ಇದರಲ್ಲಿ 13 ಮಂದಿ ಮೃತಪಟ್ಟಿದ್ದಾರೆ. 82 ಮಂದಿ ಚೇತರಿಸಿಕೊಂಡಿದ್ದಾರೆ. (ಏಜೆನ್ಸೀಸ್​)
ಕರೊನಾ ಭೀತಿಯ ನಡುವೆ ಗಡಿಯಲ್ಲಿ ದಾಳಿ-ಪ್ರತಿದಾಳಿ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
