
ಲಖನೌ:ಕೋವಿಡ್​ -19 ಹರಡುವಿಕೆ ನಿಯಂತ್ರಿಸುವಲ್ಲಿ ಸರ್ಕಾರ ಕೈಗೊಂಡ ಪ್ರಮುಖ ಉಪಕ್ರಮಗಳಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್​ ಕೂಡ ಒಂದು. ಮೂವರು ಕರೋನಾ ಸೋಂಕು ಶಂಕಿತರು ಈ ಆರೋಗ್ಯ ಸೇತು ಅಪ್ಲಿಕೇಷನ್​ನಲ್ಲಿ ಸ್ವಯಂ ಮಾಹಿತಿ ಹಂಚಿಕೊಂಡಿದ್ದು, ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಮೂವರು ಕೇಂದ್ರ ಸರ್ಕಾರದ ಅಪ್ಲಿಕೇಷನ್​ ಡೌನ್​ಲೋಡ್​ ಮಾಡಿಕೊಂಡಿದ್ದು, ಅವರು ಸ್ವಯಂ ಮೌಲ್ಯಮಾಪನಕ್ಕಾಗಿ ಪ್ರಶ್ನಾವಳಿಗಳನ್ನು ಭರ್ತಿ ಮಾಡಿದ್ದರು. ಇದು ಬಳಕೆದಾರರಿಗೆ ಸೋಂಕಿನ ಅಪಾಯದ ಮಟ್ಟವನ್ನು ತಿಳಿಸುತ್ತದೆ.ಅವರ ಅಪಾಯದ ಮಟ್ಟ ಹೆಚ್ಚಿರುವುದರಿಂದ ಪರೀಕ್ಷೆಗಾಗಿ ಸಹಾಯವಾಣಿಯನ್ನು ಸಂಪರ್ಕಿಸಲು ಅಥವಾ ಮಾಹಿತಿಯನ್ನು ಆರೋಗ್ಯ ಸಚಿವಾಲಯಕ್ಕೆ ಕಳುಹಿಸಲು ಅವರಿಗೆ ಅಪ್ಲಿಕೇಷನ್​ ಮೂಲಕವೇ ಆಯ್ಕೆ ಮಾಡಲು ಅವಕಾಶವಿತ್ತು. ಅವರು ಆರೋಗ್ಯ ಸಚಿವಾಲಯಕ್ಕೆ ತಿಳಿಸಲು ನಿರ್ಧರಿಸಿದ್ದರು.
“ಸರ್ಕಾರದಿಂದ ಆ ಮೂರು ವ್ಯಕ್ತಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಪಡೆದ ನಂತರ ಪರೀಕ್ಷೆಗೆ ಕಳುಹಿಸಲಾದ ಮಾದರಿಗಳನ್ನು ಸಂಗ್ರಹಿಸಲು ನಾವು ನಮ್ಮ ಸಿಬ್ಬಂದಿಯನ್ನು ಕಳುಹಿಸಿದ್ದೇವೆ ” ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ನರೇಂದ್ರ ಅಗರ್​ವಾಲ್​ ತಿಳಿಸಿದ್ದಾರೆ.
ಜನರು ಈ ಆರೋಗ್ಯ ಸೇತು ಅಪ್ಲಿಕೇಷನ್​ ಡೌನ್​ಲೋಡ್​ ಮಾಡಿಕೊಂಡರೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಲು, ಪ್ರಕರಣಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಹೆಚ್ಚಿನ ಸಹಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪಾಲ್ಗಾರ್​ನಲ್ಲಿ ನಡೆದ ಸಾಧುಗಳ ಗುಂಪು ಹತ್ಯೆ: ಬಂಧಿತರಾದ 101 ಜನರಲ್ಲಿ ಒಬ್ಬೇ ಒಬ್ಬ ಬೇರೆ ಧರ್ಮದವನೂ ಇಲ್ಲ ಎಂದ ಮಹಾ ಗೃಹಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
