ಮುಂಬೈ: ಏಷ್ಯಾದ ಅತಿ ದೊಡ್ಡ ಕೊಳೆಗೇರಿಯಾದ ಮುಂಬೈನ ಧಾರಾವಿಯಲ್ಲಿ ಕರೊನಾ ದಿನೇದಿನೆ ತನ್ನ ವ್ಯಾಪ್ತಿ ವಿಸ್ತರಿಸುತ್ತಿದೆ. ಅಲ್ಲಿ ಗುರುವಾರ 11 ಹೊಸ ಪ್ರಕರಣಗಳು ವರದಿಯಾಗಿದ್ದು, ಧಾರಾವಿಯಲ್ಲಿನ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇಲ್ಲಿ ಈವರೆಗೆ 8 ಜನರು ಸಾವನ್ನಪ್ಪಿದ್ದಾರೆ.
ಸುಮಾರು 15 ಲಕ್ಷ ಜನರು ವಾಸಿಸುತ್ತಿರುವ ಧಾರಾವಿಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತಿರುವುದು ಅಧಿಕಾರಿಗಳು ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಧಾರಾವಿಯಲ್ಲಿ ಕರೊನಾ ತನ್ನ ತೀವ್ರತೆ ಹೆಚ್ಚಿಸಿಕೊಂಡರೆ ತಕ್ಷಣಕ್ಕೆ ಪರಿಸ್ಥಿತಿ ನಿಯಂತ್ರಿಸುವುದು ತೀರ ಕಷ್ಟ ಎನ್ನಲಾಗುತ್ತಿದೆ.
ಹೀಗಾಗಿ ಮುಂಬೈ ಮಹಾನಗರ ಪಾಲಿಕೆ ಧಾರಾವಿ ಕೊಳೆಗೇರಿ ನಿವಾಸಿಗಳ ಸುರಕ್ಷತೆಗಾಗಿ ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಹಾಗೂ ನರ್ಸ್‌ಗಳ 10 ತಂಡಗಳನ್ನು ಸಿದ್ಧಗೊಳಿಸಿದೆ. ಈ ತಂಡಗಳು ಧಾರಾವಿಯಲ್ಲಿನ ಪ್ರತಿ ಮನೆಗಳಿಗೆ ತೆರಳಿ ಜನರ ಆರೋಗ್ಯ ತಪಾಸಣೆ ನಡೆಸಿ ಮಾದರಿಗಳನ್ನು ಪಡೆಯಲಿವೆ. ಯಾರಲ್ಲಿ ಕೆಮ್ಮು, ಶೀತ ಹಾಗೂ ಜ್ವರದ ಲಕ್ಷಣಗಳು ಕಂಡು ಬರುತ್ತವೆಯೋ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ.
ಕರೊನಾ ಹಾವಳಿಯಿಂದಾಗಿ ಮಹಾರಾಷ್ಟ್ರದ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದು, ಸೋಂಕಿತರ ಸಂಖ್ಯೆ ಮೂರು ಸಾವಿರಕ್ಕೂ ಹೆಚ್ಚಾಗಿದೆ. ದೇಶದಲ್ಲಿ ಕರೊನಾದಿಂದ ಸಾವನ್ನಪ್ಪುತ್ತಿರುವ ಪ್ರತಿ ಎರಡು ಪ್ರಕರಣಗಳಲ್ಲಿ ಮಹಾರಾಷ್ಟ್ರದಿಂದ ಒಂದು ಸಾವು ವರದಿಯಾಗುತ್ತಿದೆ. ಕಳೆದ 24 ತಾಸಿನಲ್ಲಿ 165 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,081ಕ್ಕೆ ಏರಿಕೆಯಾಗಿದೆ. ಈವರೆಗೆ 187 ಜನರು ಸಾವನ್ನಪ್ಪಿದ್ದಾರೆ.
ವಿದೇಶಗಳಿಂದ ಭಾರತಕ್ಕೆ ಬಂದವರ ಕಡ್ಡಾಯ ಸ್ಕ್ರೀನಿಂಗ್ ಹಾಗೂ ಕ್ವಾರಂಟೈನ್‌ಗೆ ಕಳುಹಿಸುವ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೊದಲೇ ಇದನ್ನು ಪಾಲಿಸಿದ್ದ ಕೇರಳ ದೇಶದಲ್ಲೇ ಕರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾದ ಮೊದಲ ರಾಜ್ಯವಾಗಿದೆ. ಆದರೆ ಮಹಾರಾಷ್ಟ್ರ ಸ್ಕ್ರೀನಿಂಗ್ ಮತ್ತು ಕ್ವಾರಂಟೈನ್ ನಿಯಮಗಳನ್ನು ಮುಂಚೆಯೇ ಅಳವಡಿಸಿಕೊಳ್ಳದ ಕಾರಣ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಹಣಕಾಸು ವಹಿವಾಟುಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂಬೈನಲ್ಲಿ ತಕ್ಷಣಕ್ಕೆ ಯಾವುದೇ ನಿರ್ಬಂಧಗಳನ್ನು ಹೇರದ ಕಾರಣ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ಕರೊನಾ ನಿಯಂತ್ರಿಸುವಲ್ಲಿ ಮುಂದುವರಿದ ರಾಷ್ಟ್ರಗಳಿಗಿಂತ ಭಾರತವೇ ಮೇಲು ಎನ್ನುತ್ತಿವೆ ಅಂಕಿ ಅಂಶಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 9 =
Remember me
