ನವದೆಹಲಿ:ದೇಶಾದ್ಯಂತ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಸಂಜೆ ಆದೇಶ ಹೊರಡಿಸಿದೆ.
ನಾಲ್ಕನೇ ಹಂತದ ಲಾಕ್‌ಡೌನ್ ನಾಳೆ (ಮೇ 31) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಐದನೇ ಹಂತದ ಲಾಕ್‌ಡೌನ್‌ನ ಈ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ:ಶಾಲಾ ಬಾಲಕಿ ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?
ಮೊದಲ ಹಂತದಲ್ಲಿ ದೇವಸ್ಥಾನಗಳು, ಪ್ರಾರ್ಥನಾ ಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಶಾಪಿಂಗ್ ಮಾಲ್‌ಗಳನ್ನು ಜೂನ್ 8ರಿಂದ ತೆರೆಯಲು ಈ ಆದೇಶದಲ್ಲಿ ಅವಕಾಶ ನೀಡಲಾಗಿದೆ.
ಎರಡನೇ ಹಂತದಲ್ಲಿ ಶಾಲೆ ಕಾಲೇಜುಗಳು, ಶೈಕ್ಷಣಿಕ ತರಬೇತಿ ಸಂಸ್ಥೆಗಳನ್ನು ತೆರೆಯುವುದಕ್ಕೆ ಸಂಬಂಧಿಸಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಇದಕ್ಕೆ ಪೂರಕವಾಗಿ ಶಾಲಾಕಾಲೇಜು ಆಡಳಿತ ಮಂಡಳಿಗಳು ಮತ್ತು ಪಾಲಕರೊಂದಿಗೆ ರಾಜ್ಯ ಸರ್ಕಾರಗಳು ಮಾತುಕತೆ ನಡೆಸಬೇಕು.
ಈ ಸಮಾಲೋಚನೆಯ ಫಲಿತಾಂಶವನ್ನು ನೋಡಿಕೊಂಡು ಶಾಲೆ-ಕಾಲೇಜುಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಜುಲೈ ತಿಂಗಳಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ:ಚೀನಾ ವಿರುದ್ಧ ಮಾತಾಡಿದ್ರೆ ‘ಟಿಕ್​ಟಾಕ್​’ ಆ್ಯಪ್​ ಸಹಿಸೋಲ್ಲ; ಕಾಮಿಡಿಯನ್​ ನಜಮಾ ಆಪಿಗೆ ಶಾಕ್​ !
ಮೂರನೇ ಹಂತದಲ್ಲಿ ಅಂತಾರಾಷ್ಟ್ರೀಯ ವಿಮಾನ ಯಾನ, ಮೆಟ್ರೋ ರೈಲು ಸೇವೆ, ಸಿನೆಮಾ ಹಾಲ್‌ಗಳು, ಜಿಮ್‌ಗಳು, ಸ್ವಿಮಿಂಗ್ ಪೂಲ್‌ಗಳು, ಮನರಂಜನಾ ಪಾರ್ಕ್‌ಗಳು, ಬಾರ್‌ಗಳು, ಆಡಿಟೋರಿಯಂಗಳು, ದೊಡ್ಡ ದೊಡ್ಡ ಸಮಾರಂಭದ ಸ್ಥಳ ಮುಂತಾದವುಗಳನ್ನು ತೆರೆಯುವ ಬಗ್ಗೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸಲಾಗುವುದು.
ಬಿಎಸ್​ವೈಗೆ ಡಿಕೆಶಿ ಸವಾಲು.. ಅದೂ 24 ಗಂಟೆ ಗಡುವು ವಿಧಿಸಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
